ನವಂಬರ್ 1 ರಿಂದ ವೃದ್ಧಾಪ್ಯ ವೇತನ 1000 ರೂ.ಗೆ ಏರಿಕೆ
ನವಂಬರ್ 1 ರಿಂದ ವೃದ್ಧಾಪ್ಯ ವೇತನ 1000 ರೂ.ಗೆ ಏರಿಕೆ

ಕರಾವಳಿ ಕರ್ನಾಟಕ ವರದಿ

ಬೆಂಗಳೂರು:
ಸಂಧ್ಯಾ ಸುರಕ್ಷಾ ಮತ್ತು ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ಯೋಜನೆಯಡಿ 65 ವರ್ಷ ಮೇಲ್ಪಟ್ಟವರಿಗೆ ನೀಡುತ್ತಿರುವ ಮಾಸಾಶನವನ್ನು 600 ರೂ.ನಿಂದ 1000 ರೂ.ಗೆ ಏರಿಸಿ ಸರ್ಕಾರ ಆದೇಶ ಹೊರಡಿಸಿದ್ದು, ನ. 1ರಿಂದ ಈ ಆದೇಶ ಜಾರಿಗೆ ಬರಲಿದೆ.

ಸಂಧ್ಯಾ ಸುರಕ್ಷಾ ಯೋಜನೆಯಡಿ ಫಲಾನುಭವಿಗಳು ಪಡೆಯುತ್ತಿರುವ 600 ರೂ. ಮಾಸಾಶನವನ್ನು ನ. 1ರಿಂದ 1000 ರೂ.ಗೆ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಜೆಟ್ನಲ್ಲಿ ಘೋಷಿಸಿದ್ದು, ಈ ಕುರಿತು ಆದೇಶ ಹೊರಡಿಸಲಾಗಿದೆ. ಸಾಮಾಜಿಕ ಭದ್ರತಾ ಯೋಜನೆಗಳಾದ ಸಂಧ್ಯಾ ಸುರಕ್ಷಾ ಫಲಾನುಭವಿಗಳ ಜತೆಗೆ ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ಯೋಜನೆಯ ಫಲಾನುಭವಿಗಳಿಗೂ ಮಾಸಾಶನ ಹೆಚ್ಚಿಸಲು ತೀರ್ಮಾನಿಸಲಾಗಿದೆ.

ಈಗಾಗಲೇ ಮಾಸಾಶನ ಪಡೆಯುತ್ತಿರುವ ಫಲಾನುಭವಿಗಳಿಗೆ ನ. 1ರಿಂದ ಪರಿಷ್ಕೃತ ಮೊತ್ತ ವಿತರಿಸಲು ಖಜಾನೆ ನಿರ್ದೇಶನಾಲಯದ ನಿರ್ದೇಶಕರು ಮತ್ತು ಜಿಲ್ಲಾ ಖಜಾನಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಪ್ರಸ್ತುತ ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ಯೋಜನೆಯಡಿ  65 ವರ್ಷ ಮೇಲ್ಪಟ್ಟವರಿಗೆ ಮಾತ್ರ ಒಂದು ಸಾವಿರ ರೂ. ಸಿಗಲಿದೆ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ