ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರ ಸಾವು

ರವಿತೇಜ ಕಾರವಾರ/ ಕರಾವಳಿ ಕರ್ನಾಟಕ ವರದಿ

ಕಾರವಾರ:
ಬೈಕ್ ಒಂದಕ್ಕೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿದ್ದು ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲೂಕಿನ ಮುದಗಾದಲ್ಲಿ  ಸೋಮವಾರ ನಡೆದಿದೆ.

ತೋಡೂರಿನ ಗುರುಪ್ರಸಾದ್ ನಾಯ್ಕ (32) ಮೃತ ದುರ್ದೈವಿ. ಈತ ಅಂಕೋಲಾ ತಾಲೂಕಿನ ಹಟ್ಟಿಕೇರಿಯ ಜೈಸಿ ಸ್ಕೂಲ್ ನಲ್ಲಿ ಕ್ಲರ್ಕ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.

ಇಂದು ತಮ್ಮ ಮನೆಯಿಂದ ಸ್ಕೂಲ್ ಗೆ ತೆರಳುತ್ತಿದ್ದ ವೇಳೆ ಮುದಗಾ ಘಟ್ಟದ ಬಳಿ ಅಪರಿಚಿತ ವಾಹನವೊಂದು ಇವರ ಬೈಕ್ ಗೆ ಗುದ್ದಿ ಪರಾರಿಯಾಗಿದೆ. ಅಪಘಾತದಿಂದಾಗಿ ರಸ್ತೆ ಬದಿಯಲ್ಲಿ ಬಿದ್ದಿರುವ ಗುರುಪ್ರಸಾದ್ ಅವರ ತಲೆ ಛಿದ್ರಗೊಂಡಿದೆ.

ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ