ಕಾರು ಅಪಘಾತ: ಚಿತ್ರನಟ ದರ್ಶನ್‌ ಕೈಗೆ ಫ್ರಾಕ್ಚರ್

ಕರಾವಳಿ ಕರ್ನಾಟಕ ವರದಿ

ಮೈಸೂರು
: ಕನ್ನಡ ಚಲನಚಿತ್ರ ನಟ ದರ್ಶನ್ ಪ್ರಯಾಣಿಸುತ್ತಿದ್ದ ಕಾರು ಸೋಮವಾರ ನಸುಕಿನ ಜಾವ ಮೈಸೂರು ಬಳಿ ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ದರ್ಶನ್ ಅವರ ಕೈ ಮುರಿದಿದೆ ಎಂದು ವರದಿಗಳು ತಿಳಿದುಬಂದಿದೆ. ಅವರ ಜೊತೆ ಪ್ರಯಾಣಿಸುತ್ತಿದ್ದ ಕನ್ನಡದ ನಟ ದೇವರಾಜ್, ಪ್ರಜ್ವಲ್ ದೇವರಾಜ್ ಅವರಿಗೂ ಗಾಯಗಳಾಗಿವೆ.

ಬೆಳಿಗ್ಗೆ ಸುಮಾರು ಮೂರು ಗಂಟೆಯ ಸಮಯದಲ್ಲಿ ಮೈಸೂರಿನ ಹೊರ ವಲಯದ ಹಿನಕಲ್ ಬಳಿಯ ರಿಂಗ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮೂವರಿಗೂ ಗಾಯವಾಗಿದ್ದು, ಮೈಸೂರು-ಬೆಂಗಳೂರು ಹೊರ ವರ್ತುಲ ರಸ್ತೆಯಲ್ಲಿರುವ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದರ್ಶನ್​ ಅವರು ಒಡೆಯ ಚಿತ್ರದ ಶೂಟಿಂಗ್​ ಮುಗಿಸಿ ವಾಪಸ್​ ಬರುತ್ತಿದ್ದಾಗ ಘಟನೆ ನಡೆದಿದೆ.
ತನ್ನ ಬಲಗೈಗೆ ಗಾಯವಾಗಿ ಶಸ್ತ್ರಚಿಕಿತ್ಸೆಗೆ ನಟ ದರ್ಶನ್ ಒಳಗಾಗಿದ್ದು ಅವರನ್ನು ತೀವ್ರ ನಿಗಾ ಘಟಕಕ್ಕೆ ಶಸ್ತ್ರಚಿಕಿತ್ಸೆ ಬಳಿಕ ವರ್ಗಾಯಿಸಲಾಗಿದೆ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ