ಬೆಂಗಳೂರು: ಯುವ ಕಾಂಗ್ರೆಸ್ ಮುಖಂಡ ಬರ್ಬರ ಹತ್ಯೆ
ಬೆಂಗಳೂರು: ಯುವ ಕಾಂಗ್ರೆಸ್ ಮುಖಂಡ ಬರ್ಬರ ಹತ್ಯೆ

ಕರಾವಳಿ ಕರ್ನಾಟಕ ವರದಿ

ಬೆಂಗಳೂರು:
ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯ ಅಲ್ಲಾಲಸಂದ್ರ ಎಂಬಲ್ಲಿ ಯುವ ಕಾಂಗ್ರೆಸ್ ಮುಖಂಡರೋರ್ವರನ್ನು ದುಷ್ಕರ್ಮಿಗಳು ತಡರಾತ್ರಿ ಮಾರಕಾಯುಧಗಳಿಂದ ಹಲ್ಲೆಗೈದು ಕೊಲೆ ಮಾಡಿರುವ ಘಟನೆ ವರದಿಯಾಗಿದೆ.

ಅಲ್ಲಾಲಸಂದ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಅರುಣ್(26) ಅವರು ಕೊಲೆಯಾದವರು. ಐದಾರು ಮಂದಿಯ ತಂಡವು ರಾತ್ರಿ ಎರಡು ಗಂಟೆ ಸುಮಾರಿಗೆ ಸಿನೆಮಾ ನೋಡಿ ಗೆಳೆಯರೊಂದಿಗೆ ಮನೆಗೆ ಮರಳುತ್ತಿದ್ದ ಅರುಣ್ ಅವರನ್ನು ಅಲ್ಲಾಲಸಂದ್ರ ಗೇಟ್ ಬಳಿ ಅಡ್ಡಗಟ್ಟಿ ಮಾರಕಾಯುಧಗಳಿಂದ ತಲೆಗೆ ಹಲ್ಲೆ ನಡೆಸಿತ್ತು.

ಯಲಹಂಕ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ರಾಜಕೀಯ ದ್ವೇಷದಿಂದ ಕೊಲೆ ನಡೆದಿರಬಹುದೆಂದು ಶಂಕಿಸಲಾಗಿದೆ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ