ರಾಣಿ ಚನ್ನಮ್ಮ ವಿವಿ ಕೇಸರೀಕರಣದ ವಿರುದ್ಧ ಹೋರಾಟ: ಸತೀಶ್ ಜಾರಕಿಹೊಳಿ

ಕರಾವಳಿ ಕರ್ನಾಟಕ ವರದಿ

ಬೆಳಗಾವಿ:
ರಾಣಿ ಚನ್ನಮ್ಮ ವಿಶ್ವವಿದ್ಯಾಲಯವನ್ನು ಕೇಸರೀಕರಣಗೊಳಿಸುತ್ತಿರುವುದರ ವಿರುದ್ಧ ಕಾಂಗ್ರೆಸ್ ಹೋರಾಟ ನಡೆಸಲಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಸತೀಶ್ ಜಾರಕಿಹೊಳಿ ಅವರು ಬುಧವಾರ ಹೇಳಿದ್ದಾರೆ.

ರಾಣಿ ಚನ್ನಮ್ಮ ವಿವಿಯಲ್ಲಿ ನಡೆದ ದಾಂದಲೆಗೂ ತಮಗೂ ಯಾವುದೇ ಸಂಬಂಧ ಇಲ್ಲ ಎಂದು ಸತೀಶ್ ಜಾರಕಿಹೊಳಿ, ಸಿಂಡಿಕೇಟ್ ಸದಸ್ಯ ರಾಜು ಚಿಕ್ಕನಗೌಡರ ಸೇರಿದಂತೆ ಕೆಲವರು ಎಬಿವಿಪಿ ಸಂಘಟನೆ ಮುಂದಿಟ್ಟುಕೊಂಡು ವಿವಿಯನ್ನು ಕೇಸರೀಕರಣ ಮಾಡುತ್ತಿದ್ದಾರೆ. ಇದರ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ವರದಿಗಾರರಿಗೆ ತಿಳಿಸಿದ್ದಾರೆ.

ಇಷ್ಟು ದಿನ ವಿಶ್ವವಿದ್ಯಾಲಯ ವಿಷಯದಲ್ಲಿ ರಾಜಕೀಯ ಮಾಡಬಾರದು ಎಂದು ಸುಮ್ಮನಿದ್ದೆ. ಇನ್ನು ಮುಂದೆ ನಾವು ರಾಜಕೀಯ ಮಾಡಬೇಕಾಗುತ್ತದೆ ಎಂದು ಜಾರಕಿಹೊಳಿ ಎಚ್ಚರಿಕೆ ನೀಡಿದರು.
ಇನ್ನು ಸತೀಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ಸುರೇಶ್ ಅಂಗಡಿ ಅವರು, ಕೇಸರೀಕರಣವನ್ನು ಭಾರತದಲ್ಲಲ್ಲದೆ ಪಾಕಿಸ್ತಾನದಲ್ಲಿ ಮಾಡಲಾದಿತೆ? ಕೇಸರಿ ನಮ್ಮ ದೇಶದ ಹೆಮ್ಮೆಯ ಸಂಕೇತ ಎಂದು ತಿರುಗೇಟು ನೀಡಿದರು.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ