ಕೊಡಗು : ಸ್ಥಳೀಯ ಸಂಸ್ಥೆಗಳ ಚುನಾವಣೆ ಘೋಷಣೆ
ಕೊಡಗು : ಸ್ಥಳೀಯ ಸಂಸ್ಥೆಗಳ ಚುನಾವಣೆ ಘೋಷಣೆ

ಕರಾವಳಿ ಕರ್ನಾಟಕ ವರದಿ

ಕೊಡಗು:
ರಾಜ್ಯ ಚುನಾವಣಾ ಆಯೋಗ ಕೊಡಗು ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ.

ಭಾರಿ ಮಳೆ ಮತ್ತು ಪ್ರವಾಹದ ಕಾರಣ ಚುನಾವಣೆಗಳನ್ನು ಮುಂದೂಡಲಾಗಿತ್ತು. ಬುಧವಾರ ಆಯೋಗ ಕುಶಾಲನಗರ, ವಿರಾಜಪೇಟೆ ಮತ್ತು ಸೋಮವಾರಪೇಟೆ ಪಟ್ಟಣ ಪಂಚಾಯಿತಿಗಳ ಚುನಾವಣೆಗೆ ದಿನಾಂಕ ನಿಗದಿ ಮಾಡಿದೆ.

ಅಕ್ಟೋಬರ್ 10ರಂದು ಜಿಲ್ಲಾಧಿಕಾರಿ ಅವರು ಅಧಿಸೂಚನೆ ಹೊರಡಿಸಲಿದ್ದಾರೆ. ಚುನಾವಣಾ ನೀತಿ ಸಂಹಿತೆ ಬುಧವಾರದಿಂದಲೇ ಜಾರಿಗೆ ಬಂದಿದೆ. ನಾಮಪತ್ರಗಳನ್ನು ಸಲ್ಲಿಸಲು ಅಕ್ಟೋಬರ್ 16 ಕೊನೆಯ ದಿನವಾಗಿದೆ. ಅ.17ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅ.20 ನಾಮಪತ್ರಗಳನ್ನು ವಾಪಸ್ ಪಡೆಯಲು ಕೊನೆಯ ದಿನವಾಗಿದೆ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ