ಬಿಬಿಎಂಪಿ ಉಪ ಮೇಯರ್ ರಮೀಳಾ ಉಮಾಶಂಕರ್ ಹಠಾತ್ ನಿಧನ

ಕರಾವಳಿ ಕರ್ನಾಟಕ ವರದಿ

ಬೆಂಗಳೂರು:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಉಪಮೇಯರ್​ ಆಗಿ ಇತ್ತೀಚೆಗಷ್ಟೇ ಆಯ್ಕೆಯಾಗಿದ್ದ ರಮೀಳಾ ಉಮಾಶಂಕರ್(44 ವರ್ಷ) ತೀವ್ರ ಹೃದಯಾಘಾತದಿಂದ ಗುರುವಾರ  ತಡರಾತ್ರಿ ನಿಧನ ಹೊಂದಿದ್ದಾರೆ.

ಕಳೆದ  ರಾತ್ರಿ 12.50ರಲ್ಲಿ ರಮೀಳಾ ಅವರಿಗೆ ತೀವ್ರ ಎದೆನೋವು ಕಾಣಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಪಶ್ಚಿಮ ಕಾರ್ಡ್​ ರಸ್ತೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಕೊನೆಯುಸಿರೆಳೆದಿದ್ದಾರೆ.

2015ರಲ್ಲಿ ನಡೆದಿದ್ದ ಬಿಬಿಎಂಪಿ ಚುನಾವಣೆಯಲ್ಲಿ ಕಾವೇರಿಪುರಂ ವಾರ್ಡ್​ನಿಂದ (103) ಜೆಡಿಎಸ್​ ಅಭ್ಯರ್ಥಿಯಾಗಿ ಸ್ಪರ್ಧಿಸಿ ರಮೀಳಾ ಅವರು ಜಯ ಸಾಧಿಸಿದ್ದರು. ಕಳೆದ ವಾರ ಸೆಪ್ಟೆಂಬರ್ 28ರಂದು ಬಿಬಿಎಂಪಿಯ ಉಪ ಮೇಯರ್​ ಆಗಿ ಅವರು ಆಯ್ಕೆಯಾಗಿದ್ದರು.

ನಿನ್ನೆ ಬೆಳಗ್ಗೆ ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ ಅವರು  ನಮ್ಮ ಮೆಟ್ರೋಗೆ ಭೇಟಿ ನೀಡಿದ್ದಾಗ, ಉಪ ಮುಖ್ಯಮಂತ್ರಿ ಪರಮೇಶ್ವರ್​ ಅವರು ನಿನ್ನೆ ಬೆಳಗ್ಗೆಯೇ ಕೆ.ಆರ್.ಮಾರುಕಟ್ಟೆ ಸುತ್ತಮುತ್ತ ಪರಿಶೀಲನೆಯಲ್ಲಿ ತೊಡಗಿದ್ದಾಗ ರಮೀಳಾ ಅವರೂ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಭಾಗವಹಿಸಿದ್ದರು. ಹೀಗೆ ದಿನವಿಡೀ ಲವಲವಿಕೆಯಿಂದಲೇ ಇದ್ದ ರಮೀಳಾ ಅವರು ಶುಕ್ರವಾರ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ.

ರಮೀಳಾ ಅವರ ಹಠಾತ್ ನಿಧನದಿಂದ ಕುಟುಂಬ ತೀವ್ರ ದುಃಖತಪ್ತವಾಗಿದೆ. ಅವರ ಬಂಧುಗಳು, ಸ್ನೇಹಿತರು, ರಾಜಕೀಯ ಮುಖಂಡರಿಗೆ ಸಹ ಈ ಸುದ್ದಿ ತೀವ್ರ ಆಘಾತವನ್ನುಂಟುಮಾಡಿದೆ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ