ಬಸ್ ಡಿಕ್ಕಿ: ದಸರಾದಲ್ಲಿ ಪಾಲ್ಗೊಳ್ಳಬೇಕಾಗಿದ್ದ ಆನೆ 'ರಂಗ'ನ ಸೊಂಟ ಮುರಿತ

ಕರಾವಳಿ ಕರ್ನಾಟಕ ವರದಿ

ಮಡಿಕೇರಿ
: ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ದಸರಾಗೆ ತೆರಳಬೇಕಿದ್ದ ಆನೆಶಿಬಿರದ ಆನೆಯೊಂದರ ಸೊಂಟ ಮುರಿದಿದೆ. ವಿರಾಜಪೇಟೆ ತಾಲೂಕಿನ ನಾಗರಹೊಳೆ ಅಭಯಾರಣ್ಯದ ಮತ್ತಿಗೋಡು ಆನೆ ಶಿಬಿರದ 'ರಂಗ' ಅಪಘಾತಕ್ಕೊಳಗಾದ ಆನೆ.

ಮತ್ತಿಗೋಡು ಆನೆ ಶಿಬಿರದ 45 ವರ್ಷ ವಯಸ್ಸಿನ ರಂಗನನ್ನು ಭಾನುವಾರ ರಾತ್ರಿ ವೇಳೆ ತಿರುಗಾಡಲು ಬಿಟ್ಟಿದ್ದರು. ಈ ವೇಳೆ ಕಣ್ಣೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಆನೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಆನೆ ಸ್ಥಳದಲ್ಲೇ ಕುಸಿದು ಬಿದ್ದು, ಸೊಂಟ ಮುರಿದಿದೆ.

ಸ್ಥಳಕ್ಕೆ ಆಗಮಿಸಿದ ಮಾವುತರು ಹಾಗೂ ಪುಶುವೈದ್ಯ ಡಾ.ಮುಜೀಬ್ ಸಹಾಯದಿಂದ ಆನೆಗೆ ಚಿಕಿತ್ಸೆ ನೀಡಿದ್ದಾರೆ. ಸದ್ಯಕ್ಕೆ ಆನೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದೆ. ಬೆಂಗಳೂರಿನ ಹೊರವಲಯದಲ್ಲಿ ರೌಡಿ ರಂಗನೆಂದೇ ಖ್ಯಾತಿ ಪಡೆದಿದ್ದ ಈ ಆನೆಯನ್ನು ಸೆರೆ ಹಿಡಿದು, ಮತ್ತಿಗೋಡು ಆನೆ ಶಿಬಿರದಲ್ಲಿ ಪಳಗಿಸಲಾಗಿತ್ತು.

ಇನ್ನೆರಡು ದಿನ ಕಳೆದಿದ್ದರೆ ರಂಗ ದಸರಾದಲ್ಲಿ ಪಾಲ್ಗೊಳ್ಳಲು ತೆರಳಬೇಕಿತ್ತು.
ಘಟನೆ ಸಂಬಂಧ ಖಾಸಗಿ ಬಸ್ ಚಾಲಕನ ವಿರುದ್ಧ ವಿರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ