ಗೋಕರ್ಣ ದೇವಾಲಯವೀಗ ಗೊಂದಲದ ಗೂಡು: ಆಡಳಿತ ಸದ್ಯಕ್ಕೆ ರಾಜ್ಯ ಸರಕಾರದ ಸುಪರ್ದಿಯಲ್ಲಿ

ರವಿತೇಜ ಕಾರವಾರ/ಕರಾವಳಿ ಕರ್ನಾಟಕ ವರದಿ

ಗೋಕರ್ಣ:
ಸರ್ವೋಚ್ಛ ನ್ಯಾಯಾಲಯದ ತೀರ್ಪು ಬರುವವರೆಗೆ ಉತ್ತರ ಕನ್ನಡ ಜಿಲ್ಲೆಯ ಐತಿಹಾಸಿಕ ಪ್ರಸಿದ್ಧಿ ಹೊಂದಿರುವ ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ಆಡಳಿತವು ರಾಜ್ಯ ಸರ್ಕಾರದ ಸುಪರ್ದಿಯಲ್ಲಿ ಇರಲಿದೆ ಸರ್ಕಾರದ ಅಧೀನ ಕಾರ್ಯದರ್ಶಿ (ಕಂದಾಯ ಇಲಾಖೆ) ಬಿ.ಎಸ್.ನಾಗರತ್ನಮ್ಮ ಆದೇಶ ಹೊರಡಿಸಿದ್ದಾರೆ.

ಆದೇಶದಂತೆ ದೇವಸ್ಥಾನದ ಆಡಳಿತವನ್ನು ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರ ಮಾಡುವುದಿಲ್ಲ. ಜೊತೆಗೆ ಜಿಲ್ಲಾಧಿಕಾರಿ ನೇತೃತ್ವದ ಸಮಿತಿಗೂ ದೇವಾಲಯದಲ್ಲಿ ಯಾವುದೇ ಅಧಿಕಾರ ಇರುವುದಿಲ್ಲ. ಇದೀಗ ಆಡಳಿತಾಧಿಕಾರಿಯಾಗಿ ನೇಮಗೊಂಡ ಕೊಲ್ಲೂರು ದೇವಾಲಯದ ಆಡಳಿತಾಧಿಕಾರಿಯೂ ಆಗಿರುವ ಎಚ್.ಹಾಲಪ್ಪ ದೇವಾಲಯದ ಆಡಳಿತವನ್ನು ನೋಡಿಕೊಳ್ಳಲಿದ್ದಾರೆ.

ಮುಂದಿನ ಆದೇಶದ ವರೆಗೆ ದೇವಸ್ಥಾನದಲ್ಲಿ ಯಥಾಸ್ಥಿತಿಯನ್ನು ಕಾಪಾಡಿಕೊಳ್ಳುವಂತೆ ಸೆ.7 ರಂದು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿತ್ತು. ಅದಕ್ಕೂ ಮುಂಚೆ ದೇವಾಲಯದ ಆಡಳಿತಾಧಿಕಾರಿಯಾಗಿ ಹಾಲಪ್ಪ ಅವರು ಆ. 30ರಂದು ಅಧಿಕಾರ ಸ್ವೀಕರಿಸಿದ್ದರು. ಈ ಹಿನ್ನಲೆಯಲ್ಲಿ ಸುಪ್ರೀಂ ಆದೇಶ ಬರುವವರೆಗೆ ಅವರೇ ಆಡಳಿತಾಧಿಕಾರಿಯಾಗಿ ಇರಲಿ ಎಂದು ನಾಗರತ್ನಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ