ಇನ್ನು ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ರಾಜಕೀಯದಲ್ಲಿ ಮುಂದುವರಿಯುವೆ: ಸಿದ್ದರಾಮಯ್ಯ

ಕರಾವಳಿ ಕರ್ನಾಟಕ ವರದಿ

ಬಾಗಲಕೋಟೆ
: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಇನ್ನು ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಬುಧವಾರ ಬಾಗಲಕೋಟೆ ಜಿಲ್ಲೆಯ ಬಾದಾಮಿ ವಿಧಾನಸಭೆ ಕ್ಷೇತ್ರದ ಗುಳೇದಗುಡ್ಡ ಪಟ್ಟಣದಲ್ಲಿ ಪುರಸಭೆಗೆ ನೂತನವಾಗಿ ಆಯ್ಕೆಯಾಗಿರುವ ಸದಸ್ಯರನ್ನು ಅಭಿನಂದಿಸುವ ಕಾರ್ಯಕ್ರಮದಲ್ಲಿ ಮಾತಬಾಡಿದ ಸಿದ್ದರಾಮಯ್ಯ ನಾನು 13 ಚುನಾವಣೆ ಎದುರಿಸಿದ್ದೇನೆ. ಇನ್ನು ಮುಂದೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಆದರೆ, ರಾಜಕಾರಣ ಬಿಡುವುದಿಲ್ಲ ಎಂದು ಘೋಷಿಸಿದರು.

2018ರ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು. ಅಂತಿಮವಾಗಿ  ಮೈಸೂರಿನ ಚಾಮುಂಡೇಶ್ವರಿ, ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಬಾದಾಮಿಯಲ್ಲಿ ಗೆದ್ದಿದ್ದರು.

"'ನನಗೂ ಸಹ ವಯಸ್ಸಾಗುತ್ತಿದೆ. ನನಗೆ 71 ವರ್ಷ ವಯಸ್ಸಾಗಿದೆ. ಹಾಗಾಗಿ ಈಗಿನ 5 ವರ್ಷ ಪೂರೈಸಿದ ಮೇಲೆ ಇನ್ನು ಮುಂದೆ ಚುನಾವಣೆಗೆ ನಿಲ್ಲೋದಿಲ್ಲ. ಅಭಿವೃದ್ಧಿ ಕೆಲಸ ಮಾಡಲು ಚುನಾವಣೆಗೆ ನಿಲ್ಲಬೇಕೆಂದಿಲ್ಲ. ಆದರೆ, ರಾಜಕೀಯದಿಂದ ನಾನು ದೂರವಾಗುವುದಿಲ್ಲ' ಎಂದು ಸಿದ್ದರಾಮಯ್ಯ ಹೇಳಿದರು.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ