ಮಧು ಸೋಲುತ್ತಾರೆ. ಮತ್ತೆ ವಿದೇಶಕ್ಕೆ ಮರಳುತ್ತಾರೆ: ಕುಮಾರ್ ಬಂಗಾರಪ್ಪ ವ್ಯಂಗ್ಯ

ಕರಾವಳಿ ಕರ್ನಾಟಕ ವರದಿ

ಶಿವಮೊಗ್ಗ :
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಮುಗಿದ ಬಳಿಕ ನವೆಂಬರ್ 6ಕ್ಕೆ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ. ನವೆಂಬರ್ 7ರಂದು ಮಧು ಬಂಗಾರಪ್ಪ ಪುನಃ ವಿದೇಶಕ್ಕೆ ಹೋಗಲಿದ್ದಾರೆ' ಎಂದು ಕುಮಾರ್ ಬಂಗಾರಪ್ಪ ಲೇವಡಿ ಮಾಡಿದ್ದಾರೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದ ಸೊರಬ ಕ್ಷೇತ್ರದ ಬಿಜೆಪಿ ಶಾಸಕ ಕುಮಾರ್ ಬಂಗಾರಪ್ಪ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪರವಾಗಿ ಮತಯಾಚನೆ ಮಾಡಿದರು.

'ಮಧು ಬಂಗಾರಪ್ಪ ಅವರು ಮಾಡಿದ್ದೂ ಏನೂ ಇಲ್ಲ. ತಂದೆಯ ಸಮಾಧಿ ಸ್ಥಳವನ್ನು ಅಭಿವೃದ್ಧಿ ಮಾಡಿಲ್ಲ. ಕ್ಷೇತ್ರವನ್ನು ಅಭಿವೃದ್ಧಿ ಮಾಡಿಲ್ಲ. ಈಗ ನನಗೂ ಕೆಲಸ ಮಾಡಲು ಬಿಡುತ್ತಿಲ್ಲ. ಈಗ ಚುನಾವಣೆಗೆ ಸ್ಪರ್ಧೆ ಮಾಡಿದ್ದಾರೆ' ಎಂದು ಕುಮಾರ್ ಬಂಗಾರಪ್ಪ ವಾಗ್ದಾಳಿ ನಡೆಸಿದರು.

ನವೆಂಬರ್ 6ರಂದು ಫಲಿತಾಂಶ ಬರಲಿದೆ. ಮಾರನೇ ದಿನವೇ ಅವರು ವಿದೇಶಕ್ಕೆ ಹೋಗುತ್ತಾರೆ. ವಿದೇಶದಿಂದಲೇ ಅಲ್ಲವೇ ಬಂದು ನಾಮಪತ್ರವನ್ನು ಸಲ್ಲಿಸಿದ್ದು ಎಂದು ಕುಮಾರ್ ಬಂಗಾರಪ್ಪ ವ್ಯಂಗ್ಯವಾಡಿದರು.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ