84ನೇ ಕನ್ನಡ ಸಾಹಿತ್ಯ ಸಮ್ಮೇಳನ ಜನವರಿಗೆ ಮುಂದೂಡಿಕೆ

ಕರಾವಳಿ ಕರ್ನಾಟಕ ವರದಿ

ಧಾರವಾಡ:
ಧಾರವಾಡದಲ್ಲಿ ಡಿಸೆಂಬರ್‌ನಲ್ಲಿ ನಡೆಯಬೇಕಿದ್ದ 84ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜನವರಿಗೆ ಮುಂದೂಡಲಾಗಿದೆ. ಡಿ.7ರಿಂದ ಮೂರು ದಿನಗಳ ಕಾಲ 84ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಬೇಕಿತ್ತು.

84ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಕಂಬಾರ ಆಯ್ಕೆ ಈ ಕುರಿತು ಮಾಹಿತಿ ನೀಡಿರುವ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ ಮನು ಬಳಿಗಾರ್, ಸಮ್ಮೇಳನದ ಸಿದ್ಧತೆಗೆ ಸಮಯಾವಕಾಶ ಕಡಿಮೆ ಇದೆ, ಆದ್ದರಿಂದ ಒಂದು ತಿಂಗಳ ಕಾಲ ಸಮ್ಮೇಳನವನ್ನು ಮುಂದೂಡಲಾಗಿದೆ. ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ಅವರ ಅಧ್ಯಕ್ಷತೆಯಲ್ಲಿ ಅ.17ರಂದು ನಡೆದ ಸಭೆಯಲ್ಲಿ ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಸಚಿವೆ ಜಯಮಾಲಾ ಸರ್ವಾಧ್ಯಕ್ಷ ಚಂದ್ರಶೇಖರ ಕಂಬಾರ ಅವರಿಗೂ ಈ ಕುರಿತು ಮಾಹಿತಿ ನೀಡಿ ಸಮ್ಮತಿ ಪಡೆಯಲಾಗಿದೆ ಎಂದು ಹೇಳಿದ್ದಾರೆ.

ಕಳೆದ ಬಾರಿ ಮೈಸೂರಿನಲ್ಲಿ ನಡೆದ ಸಮ್ಮೇಳನಕ್ಕೆ ಸುಮಾರು ಒಂದೂವರೆ ಲಕ್ಷ ಮಂದಿ ಆಗಮಿಸಿದ್ದರು. ಈ ಬಾರಿಯೂ ಒಂದು ಲಕ್ಷಕ್ಕೂ ಹೆಚ್ಚು ಮಂದಿ ಧಾರವಾಡದ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಈ ಬಾರಿಯ ಗೋಷ್ಠಿಯಲ್ಲಿ ಉತ್ತರ ಕರ್ನಾಟಕಸ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಲಾಗುತ್ತದೆ. ಜತೆಗೆ ಮಹದಾಯಿ, ಕೃಷ್ಣ ಸೇರಿದಂತೆ ನೀರಾವರಿ ಸಮಸ್ಯೆಗಳು, ಗಡಿ ಸಮಸ್ಯೆಗಳು ಈ ಬಾರಿಯ ಸಾಹಿತ್ಯ ಸಮ್ಮೇಳನದಲ್ಲಿ ಚರ್ಚೆಯಾಗಲಿವೆ. ದಲಿತ ಅಸ್ಮಿತೆ, ಕನ್ನಡ ಚಲನಚಿತ್ರ ಮತ್ತು ಕಿರುತೆರೆ, ವೈಚಾರಿಕತೆ ಮತ್ತು ಅಸಹಿಷ್ಣುತೆ, ಮರು ಓದು ಪ್ರಾಚೀನ ಸಾಹಿತ್ಯ, ಕನ್ನಡ ಶಾಲೆಗಳ ಅಳಿವು-ಉಳಿವು ಹೀಗೆ ಒಟ್ಟು 20 ವಿಷಯಗಳ ಕುರಿತು ಬೇರೆ ಬೇರೆ ಆಯಾಮಗಳಲ್ಲಿ ಚರ್ಚೆಗಳು ನಡೆಯಲಿವೆ ಎಂದು ಮನು ಬಳಿಗಾರ್ ತಿಳಿಸಿದ್ದಾರೆ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ