ಕೋಟ: ಆಂಬ್ಯುಲೆನ್ಸ್ ಮತ್ತು ಲಾರಿ ಢಿಕ್ಕಿ. ಮೂವರು ದಾರುಣ ಮೃತ್ಯು

ಕರಾವಳಿ ಕರ್ನಾಟಕ ವರದಿ

ಕುಂದಾಪುರ:
ಇಲ್ಲಿಗೆ ಸಮೀಪದ ಕೋಟದಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಆಂಬ್ಯುಲೆನ್ಸ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತವೊಂದರಲ್ಲಿ ಮೂವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಕಾರವಾರದ ಉಲ್ಲಾಸ ತಳೇಕರ, ಅವರ ಸಂಬಂಧಿ ಅಶೋಕ್ ಎಂದು ಗುರುತಿಸಲಾಗಿದ್ದು ಇನ್ನೋರ್ವರ ಗುರುತು ಇನ್ನಷ್ಟೆ ಪತ್ತೆಯಾಗಬೇಕಿದೆ. ಉಲ್ಲಾಸ ತಳೇಕರ ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಾರವಾರದ ಮದರ್ ತೆರೆಸಾ ಆಸ್ಪತ್ರೆಗೆ ಸೇರಿದ ಆಂಬ್ಯುಲೆನ್ಸ್ ಹೃದಯ ಸಂಬಂಧಿ ತೊಂದರೆಯಿಂದ ಬಳಲುತ್ತಿದ್ದ ಉಲ್ಲಾಸ ತಳೇಕರ ಅವರನ್ನು ಮಂಗಳೂರಿನ ಎ. ಜೆ. ಅಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯುವ ಸಂದರ್ಭ ರಾತ್ರಿ 12ರ ವೇಳೆಗೆ ಈ ಭೀಕರ ಅಪಘಾತ ಸಂಭವಿಸಿದೆ. ಕೋಟ ಮಣೂರು ಸಮೀಪ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಅನ್ನು ಹಾರಿ ಇನ್ನೊಂದು ಬದಿಗೆ ಎಸೆಯಲ್ಪಟ್ಟಿದೆ. ಆ ವೇಳೆ ಎದುರಿನಿಂದ ಬಂದ ಟ್ಯಾಂಕರ್ ಒಂದು ಆಂಬ್ಯುಲೆನ್ಸ್‌ಗೆ ಢಿಕ್ಕಿಯಾಗಿ ಆಂಬ್ಯುಲೆನ್ಸ್ ಅಪ್ಪಚ್ಚಿಯಾಗಿದೆ.







ಅಪಘಾತದ ರಭಸಕ್ಕೆ ಮೂವರು ಸ್ಥಳದಲ್ಲೆ ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಮೃತ ಉಲ್ಲಾಸ ತಳೇಕರ ಅವರ ಪತ್ನಿ ಸರಿತಾ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತ ದೇಹಗಳನ್ನು ಕುಂದಾಪುರ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಕೋಟ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ