188 ಪ್ರಯಾಣಿಕರನ್ನು ಹೊತ್ತಿದ್ದ ವಿಮಾನ ಸಮುದ್ರದಲ್ಲಿ ಪತನ.

ಕರಾವಳಿ ಕರ್ನಾಟಕ ವರದಿ

ಜಕಾರ್ತಾ:
188 ಪ್ರಯಾಣಿಕರನ್ನು ಹೊತ್ತಿದ್ದ ಇಂಡೋನೇಷ್ಯಾದ ಲಯನ್ ಏರ್ ಬೋಯಿಂಗ್ 737 ವಿಮಾನ ಸಮುದ್ರದಲ್ಲಿ ಪತನವಾಗಿದೆ.

ಇಂಡೋನೇಷ್ಯಾ ರಾಜಧಾನಿ ಜಕಾರ್ತಾದಿಂದ ದ್ವೀಪವೊಂದಕ್ಕೆ ಹೊರಟಿದ್ದ ವಿಮಾನ ಕೆಲವೇ ನಿಮಿಷಗಳಲ್ಲಿ ಸಂಪರ್ಕ ಕಡಿತಗೊಂಡಿದ್ದು ಸಮುದ್ರದಲ್ಲಿ ಪತನವಾಗಿದೆ. ಸ್ಥಳೀಯ ಕಾಲಮಾನ ಬೆಳಿಗ್ಗೆ 6:20 ಕ್ಕೆ ಟೇಕಾಫ್ ಆದ ವಿಮಾನ 6:33 ರ ಸಮಯಕ್ಕೆ ಸಂಪರ್ಕ ಕಳೆದುಕೊಂಡಿತ್ತು.

ವಿಮಾನದಲ್ಲಿದ್ದ ಪ್ರಯಾಣಿಕರ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಸಮುದ್ರದಲ್ಲಿ ವಿಮಾನದ ಬಿಡಿಭಾಗಗಳು ತೇಲುತ್ತಿದ್ದು ಹಲವು ಜನರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ