ಕರ್ನಾಟಕ ಉಪ ಕದನ: ಐದು ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಆರಂಭ

ಕರಾವಳಿ ಕರ್ನಾಟಕ ವರದಿ

ಬೆಂಗಳೂರು
: ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ಉಪ ಚುನಾವಣೆ ನಿಮಿತ್ತ ಮತದಾನ ಪ್ರಕ್ರಿಯೆ ಆರಂಭವಾಗಿದ್ದು 3 ಲೋಕಸಭೆ ಮತ್ತು 2 ವಿಧಾನಸಭೆ ಸೇರಿದಂತೆ ಎಲ್ಲ ಐದೂ ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದೆ.

ಶನಿವಾರ ಬೆಳಗ್ಗೆ 7ರಿಂದ ಸಂಜೆ 6ರವರೆಗೆ ಮತದಾನ ನಡೆಯಲಿದ್ದು, ನ.6 ರಂದು ಮತ ಎಣಿಕೆ ನಡೆಯಲಿದೆ. ಐದೂ ಕ್ಷೇತ್ರಗಳಲ್ಲಿ ಒಟ್ಟು 54,54,275 ಮಂದಿ ಮತದಾನದ ಹಕ್ಕು ಹೊಂದಿದ್ದಾರೆ.  ಬಳ್ಳಾರಿ, ಶಿವಮೊಗ್ಗ ಮತ್ತು ಮಂಡ್ಯ ಲೋಕಸಭಾ ಕ್ಷೇತ್ರದಾನ ಆರಂಭವಾಗಿದ್ದು, ಜಮಖಂಡಿ ಮತ್ತು ರಾಮನಗರ ವಿಧಾನಸಭಾ ವ್ಯಾಪ್ತಿಯಲ್ಲಿ ಮತದಾನ ನಡೆಯುತ್ತಿದೆ, ಬಳ್ಳಾರಿ ಲೋಕಸಭಾ ವ್ಯಾಪ್ತಿಯಲ್ಲಿ ಒಟ್ಟು 17, 13, 653 ಮತದಾರರಿದ್ದು, 1901 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಅಂತೆಯೇ ಶಿವಮೊಗ್ಗ ಲೋಕಸಭಾ ವ್ಯಾಪ್ತಿಯಲ್ಲಿ 16, 45, 519 ಮತದಾರರಿದ್ದು, ಇಲ್ಲಿ ಒಟ್ಟು 2,002 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದೆ. ಮಂಡ್ಯ ಲೋಕಸಭಾ ವ್ಯಾಪ್ತಿಯಲ್ಲಿ 16, 85, 037 ಮತದಾರರಿದ್ದು, ಇಲ್ಲಿ 2, 047 ಮತಗಟ್ಟೆಗಳನ್ನು ಸ್ಥಾಪಿಸಿ ಮತದಾನಕ್ಕೆ ಅನುವು ಮಾಡಿಕೊಡಲಾಗಿದೆ.
 
ಇನ್ನು ಜಮಖಂಡಿ ವಿಧಾನಸಭೆ ವ್ಯಾಪ್ತಿಯಲ್ಲಿ 2, 03, 706 ಮತದಾರರಿದ್ದು, ಇಲ್ಲಿ 226 ಮತಗಟ್ಟೆ ಮತ್ತು ರಾಮನಗರ ವಿಧಾನಸಭೆ ವ್ಯಾಪ್ತಿಯಲ್ಲಿ 2, 06, 360 ಮತದಾರರಿದ್ದು, ಇಲ್ಲಿಯೂ 227 ಮತಗಟ್ಟೆಗಳನ್ನು ಸ್ಥಾಪಿಸಿ ಮತದಾನ ನಡೆಸಲಾಗುತ್ತಿದೆ. ಒಟ್ಟಾರೆ ಎಲ್ಲ ಐದೂ ಕ್ಷೇತ್ರಗಳಲ್ಲಿ ಒಟ್ಟು 6,453 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 9,822 ಮತ ಯಂತ್ರಗಳ ಜತೆಗೆ 8,922 ವಿವಿ ಪ್ಯಾಟ್​ಗಳನ್ನು ಬಳಸಲಾಗುತ್ತಿದೆ.

ಅಂತೆಯೇ ಐದು ಕ್ಷೇತ್ರಗಳಲ್ಲಿ ಮಹಿಳೆಯರಿಗೆ 57 ಪಿಂಕ್ ಮತಕೇಂದ್ರಗಳನ್ನು ತೆರೆಯಲಾಗಿದೆ.

ನವೆಂಬರ್ 02: ರಾಜಸ್ಥಾನದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ(ಬಿಜೆಪಿ) ಈ ಬಾರಿ ಮುಖಭಂಗ ಅನುಭವಿಸಲಿದೆ ಎಂದು ಟೈಮ್ಸ್ ನೌ -ಸಿಎನ್ಎಕ್ಸ್ ಚುನಾವಣಾ ಪೂರ್ವ ಸಮೀಕ್ಷೆ ಫಲಿತಾಂಶ ಹೇಳುತ್ತಿದೆ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ