ಮಿನಿಸಮರದಲ್ಲಿ ಕಾಂಗ್ರೆಸ್-ಜೆಡಿಎಸ್ ನಾಗಾಲೋಟ. ಶಿವಮೊಗ್ಗವೊಂದೆ ಬಿಜೆಪಿಗೆ ಸಮಾಧಾನ

ಕರಾವಳಿ ಕರ್ನಾಟಕ ವರದಿ

ಬೆಂಗಳೂರು:
ತೀವ್ರ ಕುತೂಹಲ ಕೆರಳಿಸಿದ್ದ ಮಿನಿ ಚುನಾವಣಾ ಸಮರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಕೂಟ ಭಾರಿ ಮುನ್ನಡೆ ಸಾಧಿಸಿದ್ದು ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಎರಡರಲ್ಲಿ ವಿಜಯ ಸಾಧಿಸಿದ್ದು ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿ ಜಯ ಸಾಧಿಸಿದೆ. ಬಿಜೆಪಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಗೆದ್ದು ಸಮಾಧಾನಪಟ್ಟುಕೊಂಡಿದೆ.

ರಾಮನಗರದಲ್ಲಿ ಜೆಡಿಎಸ್​ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ, ಮಂಡ್ಯದಲ್ಲಿ ಎಲ್.ಆರ್.ಶಿವರಾಮೇಗೌಡ, ಬಳ್ಳಾರಿಯಲ್ಲಿ ಕಾಂಗ್ರೆಸ್​ನ ವಿ.ಎಸ್​.ಉಗ್ರಪ್ಪ ಹಾಗೂ ಜಮಖಂಡಿಯಲ್ಲಿ ಆನಂದ್​ ನ್ಯಾಮಗೌಡ ಜಯಭೇರಿ ಭಾರಿಸಿದ್ದರೆ ಶಿವಮೊಗ್ಗದಲ್ಲಿ ಬಿಜೆಪಿಯ ಬಿ. ವೈ. ರಾಘವೇಂದ್ರ ಗೆದ್ದಿದ್ದಾರೆ.

ಭಾರಿ ಜಿದ್ದಾಜಿದ್ದಿನ ಕ್ಷೇತ್ರ ಎಂದು ಪರಿಗಣಿಸಲಾಗಿದ್ದ ಬಳ್ಳಾರಿಯಲ್ಲಿ ಷ್ರೀರಾಮುಲು ಮತ್ತು ರೆಡ್ದಿ ಗ್ಯಾಂಗ್ ಸಂಪೂರ್ಣ ಸೋತು ಸುಣ್ಣವಾಗಿದ್ದು ಉಗ್ರಪ್ಪ ದಾಖಲೆ ಮತಗಳ ಅಂತರದಲ್ಲಿ ಜಯ ಸಾಧಿಸಿದ್ದಾರೆ. ಸ್ವಾತಂತ್ರ್ಯ ಬಂದಾಗಿನಿಂದ 2000ದ ವರೆಗೆ ಬಳ್ಳಾರಿ ಕ್ಷೇತ್ರ ಕಾಂಗ್ರೆಸ್‌ ತೆಕ್ಕೆಯಲ್ಲಿತ್ತು. ಆದರೆ ಕಳೆದ ಮೂರು ಚುನಾವಣೆಯಲ್ಲಿ ಬಿಜೆಪಿ ಕೈ ಸೇರಿತ್ತು. ಹಾಗಾಗಿ, ಮತ್ತೆ ಈ ಕ್ಷೇತ್ರವನ್ನು ತಮ್ಮ ತೆಕ್ಕೆಗೆ ಹಾಕಿಕೊಳ್ಳಲು ಹಾಗೂ ರಾಮುಲುಗೆ ಲಗಾಮು ಹಾಕಲು ಕಾಂಗ್ರೆಸ್‌ನ ದಿಗ್ಗಜರು ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ. ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಈ ಯುದ್ಧವನ್ನು ಮುನ್ನಡೆಸಿ ಗೆದ್ದಿದ್ದಾರೆ.

ಮಂಡ್ಯಲೋಕಸಭಾ ಕ್ಷೇತ್ರದಲ್ಲಿಯೂ ಜೆಡಿಎಸ್‌ನ ಶಿವರಾಮೇಗೌಡ 1.60 ಲಕ್ಷಕ್ಕೂ ಮೀರಿದ ಅಮ್ತರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಹಿಂದಿಕ್ಕಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮಾತ್ರ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ಬಿ. ವೈ ರಾಘವೇಂದ್ರ ಜೆಡಿಎಸ್‌ನ ಮಧು ಬಂಗಾರಪ್ಪ ಅವರನ್ನು ನಲ್ವತ್ತು ಸಾವಿರಕ್ಕೂ ಮೀರಿದ ಮತಗಳಿಂದ ಸೋಲಿಸಿದ್ದಾರೆ.

ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಯಂತೆ ಅನಿತಾ ಕುಮಾರಸ್ವಾಮಿ ಜಯಗಳಿಸಿದ್ದಾರೆ. ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಚುನಾವಣೆಗೆ ಎರಡು ದಿನ ಬಾಕಿ ಇರುವಾಗ ಕಣದಿಂದ ಹಿಂದೆ ಸರಿದು ಭಾರಿ ಕುತೂಹಲಕ್ಕೆ ಕಾರಣವಾಗಿತ್ತು. ಜಮಖಂಡಿ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದು ನ್ಯಾಮಗೌಡ ಅವರ ಪುತ್ರ ಆನಂದ ನ್ಯಾಮಗೌಡ ಅನುಕಂಪದ ಅಲೆಯಲ್ಲಿ ಭಾರಿ ಅಂತರದಲ್ಲಿ ವಿಜಯ ಸಾಧಿಸಿದ್ದಾರೆ.

ಗೆಲುವಿನ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದು ಬಳ್ಳಾರಿಯ ಜನರ ಪಾಲಿಗೆ ಅರ್ಥಪೂರ್ಣ ದೀಪಾವಳಿ ಎಂದು ಟ್ವೀಟ್ ಮಾಡಿದ್ದಾರೆ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ