ಮಂಗಳೂರು ವಿಮಾನ ನಿಲ್ದಾಣ ಖಾಸಗೀಕರಣಕ್ಕೆ ಕೇಂದ್ರ ನಿರ್ಧಾರ
ದೇಶದ ಆರು ವಿಮಾನ ನಿಲ್ದಾಣಗಳನ್ನು ಸರಕಾರಿ - ಖಾಸಗಿ ಸಹಯೋಗದಡಿ (ಪಿಪಿಪಿ) ಅಭಿವೃದ್ಧಿಗೊಳಿಸಲು ಕೇಂದ್ರ ಸಂಪುಟ ನಿರ್ಧಾರ.

ಕರಾವಳಿ ಕರ್ನಾಟಕ ವರದಿ

ಹೊಸದಿಲ್ಲಿ
: ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣವೂ ಸೇರಿದಂತೆ ದೇಶದ ಆರು ವಿಮಾನ ನಿಲ್ದಾಣಗಳನ್ನು ಸರಕಾರಿ - ಖಾಸಗಿ ಸಹಯೋಗದಡಿ (ಪಿಪಿಪಿ) ಅಭಿವೃದ್ಧಿಗೊಳಿಸುವ ಬಗ್ಗೆ ಕೇಂದ್ರ ಸಚಿವ ಸಂಪುಟ ಗುರುವಾರ ನಿರ್ಧರಿಸಿದೆ. ಗುತ್ತಿಗೆ ಆಧಾರದಲ್ಲಿ ಈ ವಿಮಾನ ನಿಲ್ದಾಣಗಳನ್ನು ಖಾಸಗೀಕರಣಗೊಳಿಸಲು ತೀರ್ಮಾನಿಸಲಾಗಿದ್ದು, ದಿಲ್ಲಿಯಲ್ಲಿ ಪ್ರಧಾನಿ ಅಧ್ಯಕ್ಷತೆಯಲ್ಲಿ ನಡೆದ ಸಭೆ ಈ ಮಹತ್ವದ ನಿರ್ಧಾರ ಕೈಗೊಂಡಿದೆ.

ಮಂಗಳೂರು, ಜೈಪುರ, ಅಹ್ಮದಾಬಾದ್, ಲಕ್ನೋ, ಗುವಾಹಾಟಿ, ತಿರುವನಂತಪುರ ನಿಲ್ದಾಣಗಳು ಖಾಸಗೀಕರಣಗೊಳ್ಳಲಿರುವ ವಿಮಾನ ನಿಲ್ದಾಣಗಳಾಗಿವೆ.

ಈಗಾಗಲೇ 2006ರಲ್ಲಿ ಬೆಂಗಳೂರು, ಮುಂಬಯಿ, ಹೈದರಾ ಬಾದ್ ಹಾಗೂ ದಿಲ್ಲಿ ನಿಲ್ದಾಣಗಳು ಸಾರ್ವಜನಿಕ-ಖಾಸಗಿ ಸಹಭಾಗಿತ್ವ( ಪಿಪಿಪಿ) ಅಡಿಯಲ್ಲಿ ವಿಶ್ವದರ್ಜೆಯ ಸೌಲಭ್ಯ ಪಡೆದಿದ್ದು, ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಲಾಭ ತಂದು ಕೊಟ್ಟಿವೆ ಎನ್ನಲಾಗಿದೆ. ಈ ವಿಮಾನ ನಿಲ್ದಾಣಗಳು ಖಾಸಗಿ ತೆಕ್ಕೆಗೆ ಜಾರಿದ ಹನ್ನೆರಡು ವರ್ಷಗಳ ಬಳಿಕ ಮತ್ತೆ ಕೇಂದ್ರ ಸರಕಾರ ಈ ನಿರ್ಧಾರ ಕೈಗೊಂಡಿದ್ದು, ಆರು ವಿಮಾನ ನಿಲ್ದಾಣಗಳನ್ನು ಖಾಸಗೀಕರಣಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ