ಸಾಲ ಪಡೆದವ ಅಪಘಾತದಲ್ಲಿ ಸಾವು: ಸಾಲ ಕೊಟ್ಟ ಕುಟುಂಬವೇ ಆತ್ಮಹತ್ಯೆ

ಕರಾವಳಿ ಕರ್ನಾಟಕ ವರದಿ

ಬೆಂಗಳೂರು:
ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ನಡೆದಿದೆ.

ಮೃತರನ್ನು ಜನಾರ್ದನ್(52) ಸುಷ್ಮಿತಾ, ಸುದರ್ಶಿನಿ(29) ಹಾಗೂ ಸೋನಿಕ(6) ಮೃತರು, ತಂದೆ, ತಾಯಿ, ಮಗಳು ಹಾಗೂ ಮೊಮ್ಮಗಳು ಮೃತಪಟ್ಟಿದ್ದು, ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಮಗುವಿನ ಮುಖಕ್ಕೆ ಪ್ಲಾಸ್ಟಿಕ್ ಹಾಕಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ ಎಂದು ತಿಳಸಿದುಬಂದಿದೆ.

ಸಾಲ ಪಡೆದ ವ್ಯಕ್ತಿ ಮೃತ ಪಟ್ಟ ಎಂಬ ಕಾರಣಕ್ಕೆ ಇವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ.

ಜನಾರ್ದನ್ ಮನೆ ತೆಗೆದುಕೊಳ್ಳುವ ಸಲುವಾಗಿ 25 ಲಕ್ಷ ರೂ. ಹಣವನ್ನು ನೀಡಿದ್ದರು. ಆದರೆ ಹಣ ಪಡೆದ ವ್ಯಕ್ತಿ ಅಪಘಾತದಲ್ಲಿ ಮೃತಪಟ್ಟಿದ್ದರು. ಹಣ ಪಡೆದ ವ್ಯಕ್ತಿ ಸಾವನ್ನಪ್ಪಿದ್ದರಿಂದ ನಮ್ಮ ಹಣ ವಾಪಸ್ ಬರುವುದಿಲ್ಲ ಎಂದು ಬೇಸರ ಜನಾರ್ದನ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕುಟುಂಬದ ಕೆಲ ಸದಸ್ಯರು ಹೇಳುತ್ತಿದ್ದಾರೆ.

ಜನಾರ್ದನ್ ತನ್ನ ಪತ್ನಿ ಹಾಗೂ ಮಕ್ಕಳಿಗೆ ವಿಷ ನೀಡಿ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಡೆತ್ ನೋಟ್ ಬರೆದಿದ್ದು, ಅದರಲ್ಲಿ ಮನೆ ಖರೀದಿ ಬಗ್ಗೆ ಉಲ್ಲೇಖಿಸಿದ್ದಾರೆ. ಸದ್ಯ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ಮೃತದೇಹಗಳನ್ನು ರವಾನಿಸಲಾಗಿದೆ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ