ಅನಂತ್ ಕುಮಾರ್ ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಕರಾವಳಿ ಕರ್ನಾಟಕ ವರದಿ

ಬೆಂಗಳೂರು:
ಬಹು ಅಂಗಾಂಗ ವೈಫಲ್ಯದಿಂದಾಗಿ ಸೋಮವಾರ ಬೆಳಗ್ಗೆ ನಿಧನರಾದ ಕೇಂದ್ರ ಸಚಿವ ಅನಂತ ಕುಮಾರ್‌ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಂತಿಮ ನಮನ ಸಲ್ಲಿಸಿದರು.

ವಿಶೇಷ ವಿಮಾನದ ಮೂಲಕ ಇಂದು ರಾತ್ರಿ 8.30ರ ಸುಮಾರಿಗೆ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ರಾಜ್ಯಪಾಲ ವಜುಭಾಯಿ ವಾಲಾ ಹಾಗೂ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಬರಮಾಡಿಕೊಂಡರು.

ಬಳಿಕ ನೇರವಾಗಿ ಬಸವನಗುಡಿಯಲ್ಲಿರುವ ಅನಂತ್ ಕುಮಾರ್ ಅವರ ನಿವಾಸಕ್ಕೆ ತೆರಳಿ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.

ತಮ್ಮ ಸಂಪುಟದಲ್ಲಿ ರಾಸಾಯನಿಕ ಮತ್ತು ರಸಗೊಬ್ಬರ ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾಗಿದ್ದ ಅನಂತ್ ಕುಮಾರ್ ಅವರ ಕುಟುಂಬಕ್ಕೆ ಪ್ರಧಾನಿ ಮೋದಿ ಸಾಂತ್ವನ ಹೇಳಿದರು. ನಂತರ ನವದೆಹಲಿಗೆ ವಾಪಸಾಗಿದ್ದಾರೆ.

ನಾಳೆ ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು, ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಬೆಂಗಳೂರಿಗೆ ಆಗಮಿಸಿ ಅಗಲಿದ ನಾಯಕನಿಗೆ ಅಂತಿಮ ನಮನ ಸಲ್ಲಿಸುವ ಸಾಧ್ಯತೆ ಇದೆ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ