ಪೇಜಾವರ ಶ್ರೀಗಳ ಬೆಂಗಾವಲು ವಾಹನಕ್ಕೆ ಕಾರು ಡಿಕ್ಕಿ, ದಂಪತಿ ಸಾವು

ಕರಾವಳಿ ಕರ್ನಾಟಕ ವರದಿ

ಬೆಂಗಳೂರು:
ಪೇಜಾವರ ಮಠದ ವಿಶ್ವೇಶ ತೀರ್ಥರಿಗೆ ಭದ್ರತೆ ನೀಡುತ್ತಿದ್ದ ಬೆಂಗಾವಲು ವಾಹನ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ದಂಪತಿ ಸಾವನ್ನಪ್ಪಿದ್ದಾರೆ. ಈ ದುರ್ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಕರಪನಹಳ್ಳಿ ಗೇಟ್ ಬಳಿ ಸಂಭವಿಸಿದೆ.

ಪೇಜಾವರ ಶ್ರೀಗಳ ಎಸ್ಕಾರ್ಟ್ ವಾಹನದ ಮುಂದೆ ಸಾಗುತ್ತಿದ್ದ ಪೊಲೀಸ್ ಎಸ್ಕಾರ್ಟ್ ವಾಹನಕ್ಕೆ, ಚಿಂತಾಮಣಿ ಕಡೆಯಿಂದ ಎದುರಿನಿಂದ ಬಂದ ಇಂಡಿಗೋ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಇಂಡಿಗೋ ಕಾರಿನಲ್ಲಿದ್ದ ರಾಮಕೃಷ್ಣಯ್ಯ (65) ಮತ್ತು ಸರ್ವಲೋಚನಾ (55) ಸ್ಥಳದಲ್ಲೇ ದುರ್ಮಣರಕ್ಕೀಡಾಗಿದ್ದಾರೆ.

ಚಿಂತಾಮಣಿ ನಿವಾಸಿಗಳಾದ ರಾಮಕೃಷ್ಣಯ್ಯ ನಾಮಕರಣ ಕಾರ್ಯಕ್ರಮಕ್ಕೆ ಕುಟುಂಬ ಸಮೇತ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ರಾಮಕೃಷ್ಣಯ್ಯ ಸೊಸೆ- ನಳಿನಿ ಗಂಭೀರವಾಗಿ ಗಾಯಗೊಂಡಿದ್ದು, ಕಾರು ಚಾಲಕ ನಾಗೇಶ್ ಕಾಲುಗಳಿಗೆ ಗಂಭೀರ ಗಾಯಗಳಾಗಿವೆ. ಎಸ್ಕಾರ್ಟ್ ಕಾರಿನಲ್ಲಿದ್ದ ಎಎಸ್‌ಐ ಶಂಭಯ್ಯ ಕಾಲಿಗೂ ಗಂಭೀರ ಗಾಯವಾಗಿದ್ದು, ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. 

ಪೇಜಾವರ ಶ್ರೀಗಳು ಚಿಂತಾಮಣಿ ತಾಲೂಕಿನ ಕೋನಕುಂಟ್ಲು ಗ್ರಾಮದಲ್ಲಿ ಸಮ್ಮೇಳನದಲ್ಲಿ ಭಾಗವಹಿಸಿಲು ಬೆಂಗಳೂರಿನಿಂದ ತೆರಳುತ್ತಿದ್ದರು. ಗಾಯಾಳುಗಳನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸುವ ತನಕ ಶ್ರೀಗಳು ಸ್ಥಳದಲ್ಲಿದ್ದು ಬಳಿಕಪ್ರಯಾಣ ಮುಂದುವರಿಸಿದ್ದಾರೆ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ