ತೋಟಬೆಂಗ್ರೆ ಅತ್ಯಾಚಾರ ಪ್ರಕರಣ: ಬಂಟ್ವಾಳ ಠಾಣೆ ಎ.ಎಸೈ ಅಮಾನತು

ಕರಾವಳಿ ಕರ್ನಾಟಕ ವರದಿ

ಮಂಗಳೂರು:
ತೋಟಬೆಂಗ್ರೆಯಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತೆ ನೀಡಿದ ದೂರನ್ನು ಸ್ವೀಕರಿಸಿದ ಆರೋಪದಲ್ಲಿ ಬಂಟ್ವಾಳ ಠಾಣೆಯ ಎ.ಎಸ್ಸೈ ರಘುರಾಮ ಹೆಗ್ಡೆಯವರನ್ನು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರವಿಕಾಂತೇ ಗೌಡ ಅವರು ಅಮಾನತುಗೊಳಿಸಿದ್ದಾರೆ.

ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ನ.16ರಂದು ಏಳು ಮಂದಿ ದುಷ್ಕರ್ಮಿಗಳು ನಡೆಸಿದ ಅತ್ಯಾಚಾರದ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ದೂರು ನೀಡಲು ನ.20ರಂದು ಹೋಗಿದ್ದರು. ಈ ಸಂದರ್ಭ ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿ ರಘುರಾಮ ಹೆಗ್ಡೆಯವರು ದೂರನ್ನು ಸ್ವೀಕರಿಸಲು ನಿರಾಕರಿಸಿದರು.

ಅತ್ಯಾಚಾರ ಯಾವ ಠಾಣೆಯ ವ್ಯಾಪ್ತಿಯಲ್ಲಿ ಸಂಭವಿಸಿದೆಯೊ ಅದೇ ಪೊಲೀಸ್ ಠಾಣೆಯಲ್ಲಿ ದೂರು ನೀಡುವಂತೆ ಸೂಚಿಸಿ ಸಂತ್ರಸ್ತೆಯನ್ನು ವಾಪಾಸ್ ಕಳಿಸಿದ್ದರು ಎಂದು ಆರೋಪಿಸಲಾಗಿತ್ತು.
ಈ ಪ್ರಕರಣದಲ್ಲಿ ಕರ್ತವ್ಯ ಲೋಪ ಆರೋಪದಲ್ಲಿ ರಘುರಾಮ ಹೆಗ್ಡೆಯವರನ್ನು ಸೇವೆಯಿಂದ ಅಮಾನತುಗೊಳಿಸಿ ಎಸ್ಪಿಯವರು ಆದೇಶ ಹೊರಡಿಸಿದ್ದು, ವಿಚಾರಣೆಗೆ ಆದೇಶ ನೀಡಿದ್ದಾರೆ.

ಅತ್ಯಾಚಾರ ಪ್ರಕರಣಗಳಲ್ಲಿ ಸಂತ್ರಸ್ತರು ಯಾವುದೇ ಠಾಣೆಗಳಲ್ಲಿ ದೂರು ಸಲ್ಲಿಸಬಹುದಾಗಿದ್ದು, ದೂರನ್ನು ತಿರಸ್ಕರಿಸುವಂತಿಲ್ಲ.

 
comments powered by Disqus
Facebook Twitter Google Plus Youtube
  
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ