ನನ್ನ ಪತಿಯ ಹಂತಕರನ್ನು ಹಾಗೆಯೆ ಸಾಯಿಸಬೇಕು: ಪೊಲೀಸ್ ಅಧಿಕಾರಿಯ ಪತ್ನಿ

ಕರಾವಳಿ ಕರ್ನಾಟಕ ವರದಿ

ಲಖನೌ:
ನನ್ನ ಪತಿಗೆ ಆದ ಗತಿಯೇ ಅವರನ್ನು ಕೊಂದವರಿಗೆ ಆಗಬೇಕು. ಆಗಲೇ ನಮ್ಮ ಕುಟುಂಬಕ್ಕೆ ನ್ಯಾಯ ಸಿಕ್ಕಂತಾಗುತ್ತದೆ ಎಂದು ಬುಲಂದ್ ಶಹರ್ ಹಿಂಸಾಚಾರಕ್ಕೆ ಬಲಿಯಾದ ಪೊಲೀಸ್ ಅಧಿಕಾರಿ ಸುಬೋಧ್ ಕುಮಾರ್ ಸಿಂಗ್ ಅವರ ಪತ್ನಿ ದುಃಖತಪ್ತರಾಗಿ ಹೇಳಿದ್ದಾರೆ.

ನನ್ನ ಪತಿ ಓರ್ವ ಪೊಲೀಸ್‌ ಅಧಿಕಾರಿಯಾಗಿ ಅತ್ಯಂತ ಪ್ರಾಮಾಣಿಕತೆ ಮತ್ತು ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿದ್ದಾರೆ. ತಮ್ಮ ಕರ್ತವ್ಯದಲ್ಲಿ ಎಲ್ಲ ಜವಾಬ್ದಾರಿಗಳನ್ನು ತಾವೇ ವಹಿಸಿಕೊಳ್ಳುತ್ತಿದ್ದರು. ನನ್ನ ಪತಿಯ ಮೇಲೆ ದಾಳಿಯಾಗಿರುವುದು ಇದೇ ಮೊದಲಲ್ಲ. ಈ ಹಿಂದೆ ಕರ್ತವ್ಯದಲ್ಲಿದ್ದಾಗ ಅವರು ಎರಡು ಬಾರಿ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದರು. ಈ ಬಾರಿ ಅವರ ಬಲಿದಾನವಾಗಿದೆ. ಆದರೆ ಅವರಿಗೆ ಮಾತ್ರ ನ್ಯಾಯ ಸಿಗುತ್ತಿಲ್ಲ ಎಂದು ಪತ್ನಿ ಗದ್ಗದಿತರಾಗಿ ಹೇಳಿದರು.

ಅಕ್ರಮ ಕಸಾಯಿ ಖಾನೆಗಳ ವಿರುದ್ಧ ಸೋಮವಾರ ನಡೆಯುತ್ತಿದ್ದ ಪ್ರತಿಭಟನೆಯೇ ಹಿಂಸಾಚಾರಕ್ಕೆ ತಿರುಗಿತ್ತು. ಈ ಸಂದರ್ಭದಲ್ಲಿ ಹಿಂದು ಮತ್ತು ಮುಸ್ಲಿಂ ಸಮುದಾಯದ ನಡುವೆ ಆರಂಭವಾದ ಕೋಮು ಸಂಘರ್ಷವನ್ನು ತಡೆಯಲು ಮುಂದಾದ ಸುಬೋಧ್ ಕುಮಾರ್ ಸಿಂಗ್ ದುಷ್ಕರ್ಮಿಗಳ ಗುಂಡಿಗೆ ಬಲಿಯಾಗಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ