ಸುರತ್ಕಲ್: ವೇಶ್ಯಾವಾಟಿಕೆ ಕೇಂದ್ರಕ್ಕೆ ದಾಳಿ, ಓರ್ವ ಸೆರೆ

ಕರಾವಳಿ ಕರ್ನಾಟಕ ವರದಿ

ಮಂಗಳೂರು:
  ಸುರತ್ಕಲ್ ಸಮೀಪದ ಇಡ್ಯಾದ ಕಟ್ಟಡವೊಂದಕ್ಕೆ ದಾಳಿ ನಡೆಸಿದ  ಪೊಲೀಸರು ಮೂವರು ಯುವತಿಯರನ್ನು ರಕ್ಷಿಸಿದ್ದಾರೆ. ಈ ಸಂದರ್ಭ ಈ ಯುವತಿಯರನ್ನು ಕರೆತಂದ ಆರೋಪಿ ಪುನೀತ್ ಕುಮಾರ್ ಎಂಬಾತನನ್ನು ಕಾರಿನ ಸಮೇತ ಬಂಧಿಸಲಾಗಿದೆ.

ಬಂಧಿತನಿಂದ  51,450 ರೂ., ಮೊಬೈಲ್ ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಕ್ಕೆ ಪಡೆಯಲಾಗಿದೆ. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಯುವತಿಯರನ್ನು ಬಿಡುಗಡೆಗೊಳಿಸಲಾಗಿದೆ.

ನಗರ ಪೊಲೀಸ್ ಆಯುಕ್ತ ಸುರೇಶ್ ಟಿ.ಆರ್., ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಹನುಮಂತರಾಯ, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಉಮಾ ಪ್ರಶಾಂತ್, ಎಸಿಪಿ ಮಂಜುನಾಥ ಶೆಟ್ಟಿ ಮಾರ್ಗದರ್ಶನದಲ್ಲಿ ದಾಳಿ ನಡೆಸಲಾಗಿತ್ತು.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ