ಐಪಿಎಸ್ ಅಧಿಕಾರಿ, ವಡ್ಡರ್ಸೆ ಪುತ್ರ ಮಧುಕರ ಶೆಟ್ಟಿ ಇನ್ನಿಲ್ಲ

ಕರಾವಳಿ ಕರ್ನಾಟಕ ವರದಿ


ಹೈದರಾಬಾದ್:
ಹೆಸರಾಂತ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ (47) ನಿಧನರಾಗಿದ್ದಾರೆ. ಎಚ್1 ಎನ್1  ಸೋಂಕಿನಿಂದ ಬಳಲುತ್ತಿದ್ದ ಅವರು ಹೈದರಾಬಾದ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಸಾವನ್ನಪ್ಪಿದ್ದಾರೆ.

ಹ್ಗೈದರಾಬಾದ್ ನ ರಾಷ್ಟ್ರೀಯ ಪೋಲೀಸ್ ಅಕಾಡಮಿಯ;ಲ್ಲಿ ಉಪನಿರ್ದೇಶಕರಾಗಿದ್ದ ಮಧುಕರ್ ಶೆಟ್ಟಿ ಇತ್ತೀಚೆಗೆ ತೀವ್ರ ಅಸ್ವಸ್ಥರಾಗಿ ಹೈದರಾಬಾದ್ ಕಂಟಿನೆಂಟಲ್ ಆಸ್ಪತ್ರೆಗೆ ದಾಖಲಾಗಿದ್ದರು.

ಖ್ಯಾತ ಪತ್ರಕರ್ತ ದಿ. ವಡ್ಡರ್ಸೆ ರಘುರಾಮ ಶೆಟ್ಟಿ ಅವರ ಪುತ್ರರಾಗಿದ್ದ ಮಧುಕರ್ 1999ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿದ್ದರು. ದೆಹಲಿಯ ಜವಹರಲಾಲ್ ನೆಹರೂ ವಿಶ್ವವಿದ್ಯಾನಿಲಯದಿಂದ ಸಮಾಜಶಾಸ್ತ್ರದಲ್ಲಿ ಎಂಎ ಹಾಗೂ ನ್ಯೂಯಾರ್ಕ್ ವಿವಿನಲ್ಲಿ ಪಿಎಚ್‌ಡಿ ಪದವಿ ಗಳಿಸಿದ್ದರು.

ಚಿಕ್ಕಮಗಳೂರು ಎಸ್ಪಿ ಹಾಗೂ ಲೋಕಾಯುಕ್ತ ಎಸ್ಪಿಯಾಗಿ ಖಡಕ್ ಅಧಿಕಾರಿ ಎಂದು ಗುರುತಿಸಿಕೊಂಡಿದ್ದರು. ಚಿಕ್ಕಮಗಳೂರು ಎಸ್ಪಿಯಾಗಿದ್ದ ಸಂದರ್ಭ ಜನಾನುರಾಗಿಯಾಗಿ ಎಂಬ ಹೆಸರು ಗಳಿಸಿದ್ದರು. ಜಿಲ್ಲಾಧಿಕಾರಿ ಹರ್ಷಗುಪ್ತ ಮತ್ತು ಮಧುಕರ ಶೆಟ್ಟಿ ಜೋಡಿ ಒತ್ತುವರಿ ಜಮೀನು ಬಿಡಿಸಿ ದಲಿತರಿಗೆ ಕೊಟ್ಟಿದ್ದರು. ಆ ಊರಿಗೆ ಗುಪ್ತಶೆಟ್ಟಿಹಳ್ಳಿ ಎಂದು ಹೆಸರಿಟ್ಟಿದ್ದಾರೆ. 1999ರ ಬ್ಯಾಚ್‌ ಐಪಿಎಸ್ ಅಧಿಕಾರಿಯಾಗಿರುವ ಮಧುಕರ್ ಶೆಟ್ಟಿ, ಕರ್ನಾಟಕದ ಉಡುಪಿ ಜಿಲ್ಲೆಯವರು.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ