ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ: ಚಂದ್ರ ಕೆ ಹೆಮ್ಮಾಡಿಯ ನ್ಯಾಯಾಂಗ ಬಂಧನ ವಿಸ್ತರಣೆ

ಕರಾವಳಿ ಕರ್ನಾಟಕ ವರದಿ

ಉಡುಪಿ:
ಬಾಲಕರ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಪತ್ರಕರ್ತ ಚಂದ್ರ ಕೆ.ಹೆಮ್ಮಾಡಿ ನ್ಯಾಯಾಂಗ ಬಂಧನ ಅವಧಿಯನ್ನು ಜ.11ರವರೆಗೆ ಜಿಲ್ಲಾ ಪ್ರದಾನ ಹಾಗೂ ಪೋಕ್ಸೊ ವಿಶೇಷ ನ್ಯಾಯಾಲಯ ವಿಸ್ತರಿಸಿದೆ.

ಚಂದ್ರ ಕೆ.ಹೆಮ್ಮಾಡಿಯ ನ್ಯಾಯಾಂಗ ಬಂಧನ ಅವಧಿ ಡಿ.31ಕ್ಕೆ ಮುಕ್ತಾಯವಾದ ಹಿನ್ನೆಲೆಯಲ್ಲಿ ಸೋಮವಾರ ಹಿರಿಯಡ್ಕ ಜೈಲಿನಿಂದ ಕರೆತಂದು ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು.

ನ್ಯಾಯಾಲಯ ಆರೋಪಿಗೆ ಜ.11ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದೆ. 

ಚಂದ್ರ ಹೆಮ್ಮಾಡಿ ವಿರುದ್ಧ ಬೈಂದೂರು, ಗಂಗೊಳ್ಳಿ, ಕುಂದಾಪುರ, ಕೊಲ್ಲೂರು ಠಾಣೆಗಳಲ್ಲಿ 21 ಪೋಕ್ಸೊ ಪ್ರಕರಣಗಳು ದಾಖಲಾಗಿವೆ. 

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ