ಕುಂದಾಪುರ: ಹಿಂದಿನಿಂದ ಗುದ್ದಿದ ಲಾರಿ. ಬೈಕ್ ಸವಾರ ಯುವಕ ದಾರುಣ ಮೃತ್ಯು

ಕರಾವಳಿ ಕರ್ನಾಟಕ ವರದಿ

ಕುಂದಾಪುರ:
ತಾಲೂಕಿನ ಗಂಗೊಳ್ಳಿಯಲ್ಲಿ ಇಂದು ಬೆಳಿಗ್ಗೆ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಗುರುಪ್ರಸಾದ್ ಪೂಜಾರಿ (28) ಮೃತಪಟ್ಟವರು.

ಬೈಕ್‌ನಲ್ಲಿ ಗಂಗೊಳ್ಳಿಯತ್ತ ಗುರುಪ್ರಸಾದ್ ಪೂಜಾರಿ ತೆರಳುತ್ತಿದ್ದಾಗ ಜಾಮಿಯಾ ಮೊಹಲ್ಲದ ಬಳಿ ಹಿಂದಿನಿಂದ ಬಂದ ಲಾರಿ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ಗುರುಪ್ರಸಾದ್ ಗಂಭೀರ ಗಾಯಗೊಂಡಿದ್ದಾರೆ. ತಕ್ಷಣವೆ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುಪ್ರಸಾದ್ ಸಾವನ್ನಪ್ಪಿದ್ದಾರೆ.

ಗಂಗೊಳ್ಳಿಯ ದಾಕುಹಿತ್ಲು ನಿವಾಸಿ ಗುರುಪ್ರಸಾದ್ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು ಇತ್ತೀಚೆಗಷ್ಟೆ ರಜೆಯಲ್ಲಿ ಊರಿಗೆ ಬಂದಿದ್ದರು. 

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ