ಕನ್ನಡ ಚಲನಚಿತ್ರ ರಂಗದ ದಿಗ್ಗಜರ ಮನೆಗಳ ಮೇಲೆ ಐಟಿ ದಾಳಿ

ಕರಾವಳಿ ಕರ್ನಾಟಕ ವರದಿ

ಬೆಂಗಳೂರು:
ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ಸ್ಯಾಂಡಲ್‌ವುಡ್‌ನ‌ ಕೆಲ ದಿಗ್ಗಜರ ನಿವಾಸಗಳ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಚಂದನವನದ ನಟರು ಮತ್ತು ನಿರ್ಮಾಪಕರ ಮನೆಗಳ ಮೇಲೆ ಮೊದಲ ಬಾರಿಗೆ ಅತಿ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿರುವ ಐಟಿ ದಾಳಿ ಇದಾಗಿದೆ.

ಬೆಂಗಳೂರಿನಲ್ಲಿ ಸುಮಾರು 25 ಕಡೆ ಏಕ ಕಾಲದಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ, ನಾಲ್ವರು ನಟರು ಹಾಗೂ ನಾಲ್ವರು ನಿರ್ಮಾಪಕರ ಮನೆ ಹಾಗೂ ದಾಳಿ ನಡೆಸಿ, ಆಸ್ತಿ ಪತ್ರಗಳು ಹಾಗೂ ದಾಖಲೆ ಪರಿಶೀಲನೆ ನಡೆಸಿದ್ದಾರೆ.

ಕೆಜಿಎಫ್ ಸಿನಿಮಾ ನಿರ್ಮಾಪಕ ವಿಜಯ್ ಕಿರಂಗದೂರು, ದಿ ವಿಲನ್ ನಿರ್ಮಾಪಕ ಸಿ.ಆರ್ ಮನೋಹರ್ ಹಾಗೂ ರಾಕ್ ಲೈನ್ ವೆಂಕಟೇಶ್, ಮತ್ತು ಜಯಣ್ಣ ಅವರ ಮನೆಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಜೆ.ಪಿ ನಗರದಲ್ಲಿರುವ ನಟ ಸುದೀಪ್ ಮನೆ, ಸದಾಶಿವ ನಗರದಲ್ಲಿರುವ ಶಿವರಾಜ್ ಕುಮಾರ್ ಹಾಗೂ ಪುನೀತ್ ಮನೆ, ಕತ್ರಿಗುಪ್ಪೆಯಲ್ಲಿರುವ ನಟ ಯಶ್ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. 

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ