ದುಷ್ಕರ್ಮಿಗಳ ತಂಡದಿಂದ ಯುವಕನ ಕೊಲೆ: ಪ್ರೇಯಸಿಯ ಅಣ್ಣ ನಡೆಸಿದ ಕೃತ್ಯ ಎಂಬ ಅನುಮಾನ

ಕರಾವಳಿ ಕರ್ನಾಟಕ ವರದಿ

ಮಂಗಳೂರು:
ದುಷ್ಕರ್ಮಿಗಳ ತಂಡವೊಂದು ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಂಗಳೂರು ಹೊರವಲಯದ ಪಂಜಿಮೊಗರು ಎಂಬಲ್ಲಿ ನಡೆದಿದೆ. ದುಷ್ಕರ್ಮಿಗಳ ದಾಳಿಗೆ ಒಳಗಾಗಿ ಮೃತಪಟ್ಟ ಯುವಕನನ್ನು ರಾಕೇಶ್ (26) ಎಂದು ಗುರುತಿಸಲಾಗಿದೆ.

ರಾಕೇಶ್ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದು ಆಕೆಯ ಅಣ್ನನಿಂದಲೇ ರಾಕೇಶ್ ಕೊಲೆಯಾಗಿರಬಹುದು ಎಂದು ಹೇಳಲಾಗುತ್ತಿದೆ.

ನಿನ್ನೆ ರಾತ್ರಿ ಮಾತುಕತೆಗಾಗಿ ರಾಕೇಶ್‌ನನ್ನು ಕರೆಯಲಾಗಿದ್ದು ಆತನ ಮೇಲೆ ಪೂರ್ವನಿಯೋಜಿತವಾಗಿ ಮಾರಕಾಸ್ತ್ರದಿಂದ ದಾಳಿ ನಡೆದಿದೆ.

ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಶೋಧ ನಡೆಸಿದ್ದಾರೆ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ