ಖಾಸಗಿ ಬಸ್‌ ಸಿಬ್ಬಂದಿಯಿಂದ ಯುವತಿಗೆ ಲೈಂಗಿಕ ಕಿರುಕುಳ: ದೂರು

ಕರಾವಳಿ ಕರ್ನಾಟಕ ವರದಿ

ಬೆಂಗಳೂರು
: ಖಾಸಗಿ ಬಸ್ ಸಿಬ್ಬಂದಿ ಚಲಿಸುತ್ತಿದ್ದ ಬಸ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದು ದೂರು ದಾಖಲಿಸಲಾಗಿದೆ.

ಶಿವಮೊಗ್ಗದಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ನಲ್ಲಿ ಕಂಡಕ್ಟರ್‌ 19 ವರ್ಷದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ. ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಹೊಸಕೋಟೆಯ ಕಾಲೇಜಿನಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಶಿವಮೊಗ್ಗದಿಂದ ಬೆಂಗಳೂರಿಗೆ ವಾಪಾಸ್ಸಾಗುವಾಗ ಈ ಘಟನೆ ನಡೆದಿದೆ. ಆಕೆ ನಿದ್ದೆಗೆ ಜಾರಿದ್ದ ಸಂದರ್ಭದಲ್ಲಿ ಕಂಡಕ್ಟರ್ ಲೈಂಗಿಕ ಕಿರುಕುಳ ನೀಡಿದ್ದಾನೆ. ಆಕೆ ಕೂಗಾಡಿದಾಗ ಆತ ಸ್ಥಳದಿಂದ ಪರಾರಿಯಾಗಿದ್ದಾನೆ.

 ಅದೇ ದಿನ ರಾತ್ರಿ ಆ ಬಸ್ ತುಮಕೂರು ರಸ್ತೆ ಗೊರಗುಂಟೆಪಾಳ್ಯ ಬಳಿ ಬಂದಾಗ ಬಸ್ ನಿಲ್ಲಿಸಿ ಅವರು ಕಂಡಕ್ಟರ್‌ಗಾಗಿ ಹುಡುಕಾಟ ನಡೆಸಿದ್ದಾರೆ, ಆತ ಸಿಗದ ಕಾರಣ ಚಾಲಕನಿಗೆ ಥಳಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ

 
comments powered by Disqus
Facebook Twitter Google Plus Youtube
  
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ