ಕೊಂಕಣ ರೈಲಿನ ರೂವಾರಿ ಮಾಜಿ ಕೇಂದ್ರ ಸಚಿವ ಜಾರ್ಜ್ ಫೆರ್ನಾಂಡಿಸ್ ಇನ್ನಿಲ್ಲ

ಕರಾವಳಿ ಕರ್ನಾಟಕ ವರದಿ

ನವದೆಹಲಿ
: ಕೊಂಕಣ ರೈಲ್ವೇ ಯೋಜನೆಯ ರೂವಾರಿ, ಮಾಜಿ ರಕ್ಷಣಾ ಸಚಿವ, ಮಂಗಳೂರಿನ ಮಗ ಜಾರ್ಜ್ ಫೆರ್ನಾಂಡಿಸ್ ನಿಧನರಾಗಿದ್ದಾರೆ. ಅವರು ದೀರ್ಘಕಾಲೀನ ಅಸ್ವಸ್ಥತೆಯಿಂದ ಬಳಲುತ್ತಿದ್ದರು ಮತ್ತು ಕಳೆದೊಂದು ದಶಕದಲ್ಲಿ ಸಕ್ರಿಯ ಸಾರ್ವಜನಿಕ ಜೀವನದಿಂದ ದೂರವಾಗಿದ್ದರು.

ತುರ್ತು ಪರಿಸ್ಥಿತಿಯ ವಿರುದ್ಧ ಹೋರಾಟದಲ್ಲಿ ಮಂಚೂಣಿಯಲ್ಲಿದ್ದ ಜಾರ್ಜ್ ಫೆರ್ನಾಂಡಿಸ್ ಕಾರ್ಮಿಕ ನಾಯಕರಾಗಿ ಬೆಳೆದುಬಂದವರು. ಮೊರಾರ್ಜಿ ದೇಸಾಯಿ ಅವರ ಸರ್ಕಾರದಲ್ಲಿ ಸಚಿವರಾಗಿದ್ದ ಜಾರ್ಜ್ ಬಳಿಕ ವಿ ಪಿ ಸಿಂಗ್ ಅವರ ಸರ್ಕಾರದಲ್ಲಿ ರೈಲ್ವೇ ಸಚಿವರಾಗಿದ್ದವರು. ಈ ಅವಧಿಯಲ್ಲಿ ಕರ್ನಾಟಕದ ಕರಾವಳಿ ಮತ್ತು ಮುಂಬೈ ನಡುವೆ ಶತಮಾಗಳ ಕನಸಾಗಿ ಉಳಿದಿದ್ದ ಕೊಂಕಣ ರೈಲ್ವೇ ಯೋಜನೆಗೆ ಅವರು ಚಾಲನೆ ನೀಡಿದ್ದರು.

ಬಳಿಕ ವಾಜಪೇಯಿ ಪ್ರಧಾನಿಯಾಗಿದ್ದ ಅವಧಿಯಲ್ಲಿ ಜಾರ್ಜ್ ರಕ್ಷಣಾ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಶವಪೆಟ್ಟಿಗೆ ಹಗರಣ ಬೆಳಕಿಗೆ ಬಂದ ಬಳಿಕ ಅವರು ರಾಜೀನಾಮೆ ನೀಡಿದ್ದರು.

ಮಂಗಳೂರಿನಲ್ಲಿ ಜನಿಸಿದ್ದ ಜಾರ್ಜ್ ಫೆರ್ನಾಂಡಿಸ್ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದರು. ಬಳಿಕ ಮುಂಬಯಿಗೆ ತೆರಳಿ ಅಲ್ಲಿ ಹೋರಾಟಗಳ ಮೂಲಕ ಪ್ರಸಿದ್ಧರಾಗಿದ್ದರು.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ