ಹೊಸ ರಫೇಲ್ ಒಪ್ಪಂದದಲ್ಲಿ ನನ್ನ ಪಾತ್ರವಿಲ್ಲ ಎಂದಿದ್ದಾರೆ ಪರಿಕ್ಕರ್: ರಾಹುಲ್ ಗಾಂಧಿ

ಕರಾವಳಿ ಕರ್ನಾಟಕ ವರದಿ

ಕೊಚ್ಚಿ:
ಹೊಸ ರಫೇಲ್ ರಕ್ಷಣಾ ಒಪ್ಪಂದದಲ್ಲಿ ತನ್ನ ಪಾತ್ರವೇನೂ ಇಲ್ಲ ಎಂದು ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರೇ ಸ್ಪಷ್ಟಪಡಿಸಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಗೋವಾದ ಪಣಜಿಯಲ್ಲಿ ಖಾಸಗಿ ಪ್ರವಾಸದ ವೇಳೆ ಮಂಗಳವಾರ ಪರಿಕ್ಕರ್ ಅವರನ್ನು ರಾಹುಲ್ ಗಾಂಧಿ ಭೇಟಿ ಮಾಡಿದ್ದರು.  ಅನಾರೋಗ್ಯದಿಂದ ಬಳಲುತ್ತಿರುವ ಪರಿಕ್ಕರ್ ಅವರ ಯೋಗಕ್ಷೇಮ ವಿಚಾರಿಸಲು ಅವರನ್ನು ಭೇಟಿಯಾಗಿದ್ದರು.

ಭೇಟಿಯ ನಂತರ ಕೇರಳದ ಕೊಚ್ಚಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, "ಮಾಜಿ ರಕ್ಷಣಾ ಸಚಿವ ಪರಿಕ್ಕರ್ ಅವರು ಹೊಸ ರಫೇಲ್ ಒಪ್ಪಂದದಲ್ಲಿ ತಮ್ಮ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅದರೆ ಈ ಹೊಸ ಒಪ್ಪಂದದ ಸೂತ್ರಧಾರಿ ಪ್ರಧಾನಿ ನರೇಂದ್ರ ಮೋದಿ. ಅನಿಲ್ ಅಂಬಾನಿ ಅವರಿಗೆ ಸಹಾಯ ಮಾಡುವುದಕ್ಕಾಗಿ ಅವರು ಈ ಡೀಲ್ ಮಾಡಿಕೊಂಡಿದ್ದಾರೆ" ಎಂದಿದ್ದಾರೆ.

ಭಾರತ ಮತ್ತು ಫ್ರಾನ್ಸ್ ಸರ್ಕಾರದ ನಡುವೆ ನಡೆದ ರಫೇಲ್ ಒಪ್ಪಂದದಲ್ಲಿ ಅವ್ಯವಹಾರ ನಡೆದಿದ್ದು, ಅದರ ತನಿಖೆಯಾಗಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

 
comments powered by Disqus
Facebook Twitter Google Plus Youtube
  
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ