ಉಡುಪಿಗೆ ನೂತನ ಜಿಲ್ಲಾಧಿಕಾರಿಯಾಗಿ ಹೆಪ್ಸಿಬಾ ರಾಣಿ: ಪ್ರಿಯಾಂಕಾ ಮೇರಿ ಪ್ರವಾಸೋದ್ಯಮಕ್ಕೆ

ಕರಾವಳಿ ಕರ್ನಾಟಕ ವರದಿ

ಉಡುಪಿ:
ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಐಎಎಸ್‌ ಅಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರು ನೇಮಕಗೊಂಡಿದ್ದಾರೆ. ಈ ವರೆಗೆ ಜಿಲ್ಲಾಧಿಕಾರಿಯಾಗಿದ್ದ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಅವರು ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರಾಗಿ ವರ್ಗವಾಗಿದ್ದಾರೆ.

ಕೊರ್ಲಪಾಟಿ ಪ್ರಸ್ತುತ ಹುಬ್ಬಳ್ಳಿ-ಧಾರವಾಡದ ವಿಶೇಷ ಉದ್ದೇಶ ವಾಹನದ ಆಡಳಿತ ನಿರ್ದೇಶಕರಾಗಿದ್ದಾರೆ. ಈ ಹಿಂದೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾಗಿಯೂ ಸೇವೆ ಸಲ್ಲಿಸಿದ್ದರು.

ಮೂಲತಃ ಆಂಧ್ರಪ್ರದೇಶದವರಾಗಿರುವ ಹೆಪ್ಸಿಬಾ ಬಸವಕಲ್ಯಾಣದಲ್ಲಿ ಸಹಾಯ ಕಮೀಷನರ್ ಆಗಿ ಕೆಲಸ ಮಾಡಿದ್ದಾರೆ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ