ವಾಧ್ರಾ ವಿರುದ್ಧ ಇಂದೂ ಮುಂದುವರಿಯಲಿದೆ ಇಡಿ ವಿಚಾರಣೆ

ಕರಾವಳಿ ಕರ್ನಾಟಕ ವರದಿ

ನವದೆಹಲಿ:
ಅಕ್ರಮ ಆಸ್ತಿ ಹೊಂದಿರುವ ಆರೋಪದ ಮೇಲೆ ಜಾರಿ ನಿರ್ದೇಶನಾಲಯವು ಉದ್ಯಮಿ ಮತ್ತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ ರಾಬರ್ಟ್ ವಾದ್ರಾ ಅವರನ್ನು ಬುಧವಾರ ವಿಚಾರಣೆಗೆ ಒಳಪಡಿಸಿದ್ದು ಗುರುವಾರವೂ ವಿಚಾರಣೆ ಮುಂದುವರಿಯಲಿದೆ.

ಬುಧವಾರ ಸುಮಾರು 5 ಗಂಟೆಗೂ ಹೆಚ್ಚು ಕಾಲ ವಾದ್ರಾ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸತತವಾಗಿ ವಿಚಾರಣೆಗೊಳಪಡಿಸಿದರು.

ಲಂಡನ್ ಮತ್ತು ಇತರೆಡೆ ಅಕ್ರಮವಾಗಿ ಆಸ್ತಿ ಹೊಂದಿರುವ ಆರೋಪ ವಾದ್ರಾ ಅವರ ಮೇಲಿದೆ. ಈ ಮಧ್ಯೆ, 'ಯುಪಿಎ ಸರ್ಕಾರ ಅಧಿಕಾರದಲ್ಲಿದ್ದ ಅವಧಿಯಲ್ಲಿ ಮನೆಗಳನ್ನು ಕಿಕ್ ಬ್ಯಾಕ್ ಮೂಲಕ ವಾದ್ರಾ ಪಡೆದಿದ್ದಾರೆ' ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಆರೋಪಿಸಿದ್ದಾರೆ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ