ಆಡಿಯೊದಲ್ಲಿರುವ ಧ್ವನಿ ನನ್ನದೆ ಎಂದ ಯಡಿಯೂರಪ್ಪ: ರಾಜಕೀಯ ನಿವೃತ್ತಿ ಯಾವಾಗ ಎಂದಿದೆ ಕಾಂಗ್ರೆಸ್

ಕರಾವಳಿ ಕರ್ನಾಟಕ ವರದಿ

ಬೆಂಗಳೂರು:
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬಿಡುಗಡೆ ಮಾಡಿರುವ ಆಡಿಯೋದಲ್ಲಿನ ಧ್ವನಿ ನನ್ನದೇ' ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಒಪ್ಪಿಕೊಂಡಿದ್ದಾರೆ.

ನನ್ನ ಬಳಿ ಗುರುಮಿಠಕಲ್ ಜೆಡಿಎಸ್ ಶಾಸಕ ನಾಗನಗೌಡ ಪುತ್ರ ಶರಣ್ ಗೌಡ ಮಾತನಾಡಿದ್ದು ನಿಜ. ಆದರೆ ಆಡಿಯೋ ಹಿಂದೆ ಕುಮಾರಸ್ವಾಮಿ ಅವರ ಕುತಂತ್ರ ರಾಜಕೀಯ ನಡೆಸಿದ್ದಾರೆ' ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷರೂ ಆಗಿರುವ ಯಡಿಯೂರಪ್ಪ ಹೇಳಿದರು.

ಹುಬ್ಬಳ್ಳಿಯಲ್ಲಿ ಭಾನುವಾರ ಮಾತನಾಡಿದ ಯಡಿಯೂರಪ್ಪ ಅವರು 'ಆಡಿಯೋದಲ್ಲಿ ನಾನು ಮಾತನಾಡಿದ ವಿಚಾರಗಳು ಬೇರೆಯೇ ಇದೆ. ಆದರೆ ಕುಮಾರಸ್ವಾಮಿ ಅವರಿಗೆ ಬೇಕಾಗಿರುವುದನ್ನು ಮಾತ್ರ ಬಳಸಿಕೊಂಡು ಸತ್ಯವನ್ನು ಮರೆ ಮಾಚಿದ್ದಾರೆ ಎಂದು ಯಡಿಯೂರಪ್ಪ ದೂರಿದರು.

'ಸಚಿವ ಎಚ್.ಡಿ.ರೇವಣ್ಣ ಅವರು, ನಮ್ಮದು ಸೂಟ್‌ಕೇಸ್‌ ಸಂಸ್ಕೃತಿಯ ಪಕ್ಷ. ಸೂಟ್‌ ಕೇಸ್‌ ಇಲ್ಲದೇ ಏನೂ ಕೆಲಸ ನಡೆಯುವುದಿಲ್ಲ ಎಂದು ಹೇಳಿರುವ ವಿಡಿಯೋ ನನ್ನ ಬಳಿ ಇದೆ. ಅದನ್ನು ಬಿಡುಗಡೆ ಮಾಡುತ್ತೇನೆ ಎಂದರು.

ಆಡಿಯೋದಲ್ಲಿರುವ ಧ್ವನಿ ನನ್ನದೇ ಎಂದು ಹೇಳಿರುವ ಯಡಿಯೂರಪ್ಪ ರಾಜೀನಾಮೆ ಯಾವಾಗ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಧ್ವನಿ ನನ್ನದು ಎಂದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಯಡಿಯೂರಪ್ಪ ಶುಕ್ರವಾರ ಹೇಳಿದ್ದರು.

 
comments powered by Disqus
Facebook Twitter Google Plus Youtube
  
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ