ಆಪರೇಷನ್ ಕಮಲ ಆಡಿಯೊ ಪ್ರಕರಣ: ಬಿಎಸ್‌ವೈ ಸೇರಿ ನಾಲ್ವರ ವಿರುದ್ಧ FIR ದಾಖಲು

ಕರಾವಳಿ ಕರ್ನಾಟಕ ವರದಿ

ರಾಯಚೂರು:
ರಾಜ್ಯ ಬಿಜೆಪಿ ಪಾಳಯವನ್ನು ತಲ್ಲಣಗೊಳಿಸಿರುವ ಆಪರೇಷನ್ ಕಮಲ ಆಡಿಯೊ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಮತ್ತು ಇತರ ಮೂವರ ಮೇಲೆ ರಾಯಚೂರು ಜಿಲ್ಲೆಯ ದೇವದುರ್ಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಯಡಿಯೂರಪ್ಪ ಹಾಗೂ ಶಾಸಕರಾದ ಪ್ರೀತಂ ಗೌಡ, ಕೆ ಶಿವನಗೌಡ ನಾಯಕ್ ಮತ್ತು ಮಾಜಿ ಪತ್ರಕರ್ತ ಮರಮಕಲ್ ಎಂಬವರ ವಿರುದ್ಧ ಗುರುಮಿಠಕಲ್ ಕ್ಷೇತ್ರದ ಜೆಡಿಎಸ್ ಶಾಸಕ ನಾಗನಗೌಡ ಕಂದಕನೂರು ಅವರ ಪುತ್ರ ಶರಣಗೌಡ ಕಂಡಕೂರು ಎಫ್ಐಆರ್ ದಾಖಲು ಮಾಡಿದ್ದಾರೆ.

ತನ್ನ ತಂದೆಗೆ ಬಿಜೆಪಿ ಸೇರುವಂತೆ ಮನವೊಲಿಸುವಂತೆ 10 ಕೋಟಿ ರೂಪಾಯಿ ನೀಡುವುದಾಗಿ ಆಮಿಷವೊಡ್ಡಿ ಇಲ್ಲದಿದ್ದರೆ ನಿನ್ನ ರಾಜಕೀಯ ಜೀವನವನ್ನು ನಾಶ ಮಾಡುವುದಾಗಿ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೇವದುರ್ಗ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮೊದಲ ಆರೋಪಿಯಾಗಿ ಬಿ ಎಸ್ ಯಡಿಯೂರಪ್ಪ, 2ನೇ ಆರೋಪಿ ದೇವದುರ್ಗ ಶಾಸಕ ಕೆ.ಶಿವನಗೌಡ ನಾಯಕ , 3ನೇ ಆರೋಪಿ ಹಾಸನ ಶಾಸಕ ಪ್ರೀತಂಗೌಡ ಮತ್ತು  ಪತ್ರಕರ್ತ ಮರಮಕಲ್ ಎನ್ನುವರನ್ನು 4ನೇ ಆರೋಪಿಯನ್ನಾಗಿ ಮಾಡಲಾಗಿದೆ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ