ಉಡುಪಿ ಜಿಲ್ಲಾ ನೂತನ ಎಸ್‌ಪಿ ಆಗಿ ಅಧಿಕಾರ ಸ್ವೀಕರಿಸಿದ ನಿಶಾ ಜೇಮ್ಸ್

ಕರಾವಳಿ ಕರ್ನಾಟಕ ವರದಿ

ಉಡುಪಿ
: ಜಿಲ್ಲೆಯ ನೂತನ ಪೊಲೀಸ್ ಅಧೀಕ್ಷಕರಾಗಿ ನೇಮಕಗೊಂಡಿರುವ ಐಪಿಎಸ್ ಅಧಿಕಾರಿ ನಿಶಾ ಜೇಮ್ಸ್ ಇಂದು ಅಧಿಕಾರ ಸ್ವೀಕರಿಸಿದರು. ನಿರ್ಗಮನ ಎಸ್‌ಪಿ ಲಕ್ಷಣ ನಿಂಬರ್ಗಿ ನಿಶಾ ಜೇಮ್ಸ್ ಅವರಿಗೆ ಅಧಿಕಾರವನ್ನು ಹಸ್ತಾಂತರಿಸಿದರು.

ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ನಿಶಾ ಜೇಮ್ಸ್ ಕಾನೂನು ಸುವ್ಯವಸ್ಥೆ ಕಾಪಾಡುವುದು ನನ್ನ ಮೊದಲ ಆದ್ಯತೆಯಾಗಲಿದೆ ಎಂದು ಹೇಳಿದ್ದಾರೆ.

ನಿಶಾ ಜೇಮ್ಸ್ 2012ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದು ಈ ತನಕ ಬೆಂಗಳೂರಿನಲ್ಲಿ ಕರ್ನಾಟಕ ಮೀಸಲು ಪೊಲೀಸ್ ಪಡೆಯ 4ನೆಯ ಬೆಟಾಲಿಯನ್ ಕಮಾಂಡರ್ ಆಗಿದ್ದರು. ನಿಶಾ ಜೇಮ್ಸ್ ದೆಹಲಿ ವಿಶ್ವವಿದ್ಯಾಲಯದಲ್ಲಿ ಇಂಗ್ಲೀಷ್ ಸಾಹಿತ್ಯವನ್ನು ಅಧ್ಯಯನ ಮಾಡಿದ್ದಾರೆ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ