ಬಸ್ ಮತ್ತು ಟಿಪ್ಪರ್ ಢಿಕ್ಕಿ: ಮಹಿಳೆ ಮೃತ್ಯು. ಹಲವರಿಗೆ ಗಾಯ

ಕರಾವಳಿ ಕರ್ನಾಟಕ ವರದಿ

ಕಾರ್ಕಳ:
ಇಲಿನ ಬೆಳ್ಮಣ್ ಸಮೀಪ ನಡೆದ ಭೀಕರ ಅಪಘಾತದಲ್ಲಿ ಮಹಿಳೆಯೋರ್ವರು ಮೃತಪಟ್ಟು ಹಲವರಿಗೆ ಗಂಭೀರ ಗಾಯಾಗಳಾಗಿವೆ.

ಶನಿವಾರ ಸಂಜೆ ಖಾಸಗಿ ಬಸ್ ಮತ್ತು ಟಿಪ್ಪರ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಢಿಕ್ಕಿಯ ರಭಸಕ್ಕೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ಆಸ್ಪತ್ರೆಯಲ್ಲಿ ಇಪ್ಪತ್ತಕ್ಕೂ ಹೆಚ್ಚು ಮಂದಿ ಚಿಕಿತ್ಸೆ ಪಡೆದಿದ್ದಾರೆ.

ಅಪಘಾತದಲ್ಲಿ ಬಸ್ ಮತ್ತು ಟಿಪ್ಪರ್ ಮುಂಭಾಗ ನಜ್ಜುಗುಜ್ಜಾಗಿವೆ. ಅಪಘಾತದಿಂದ ಕೆಲ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತು. ಕಾರ್ಕಳ ಗ್ರಾಮಾಂತರ ಠಾಣಾಧಿಕಾರಿ ನಾಸಿರ್ ಹುಸೇನ್ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಗಾಯಾಳುಗಳಿಗೆ ನರವಾದರು.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ