ತುಮಕೂರು ವಾಪಸ್ ಕೊಡಿ: ದೇವೇಗೌಡರಿಗೆ ಪರಮೇಶ್ವರ್ ಮನವಿ

ಕರಾವಳಿ ಕರ್ನಾಟಕ ವರದಿ

ಬೆಂಗಳೂರು
: ತುಮಕೂರು ಕ್ಷೇತ್ರವನ್ನು ವಾಪಸ್ ಬಿಟ್ಟುಕೊಡುವಂತೆ ಜೆಡಿಎಸ್ ವರಿಷ್ಠ ದೇವೇಗೌಡರಿಗೆ ಉಪಮುಖ್ಯಮಂತ್ರಿ, ತುಮಕೂರು ಉಸ್ತುವಾರಿ ಸಚಿವ ಜಿ.ಪರಮೇಶ್ವರ್ ಮನವಿ ಮಾಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಆನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ದೇವೇಗೌಡರೇ ತುಮಕೂರಿನಲ್ಲಿ ಸ್ಪರ್ಧಿಸುವುದಾದರೆ ನಮ್ಮ ಅಭ್ಯಂತರವಿಲ್ಲ ಆದರೆ ಬೇರೆಯವರು ಸ್ಪರ್ಧಿಸುವುದಾದರೆ ತುಮಕೂರು ನಮಗೇ ಬಿಟ್ಟುಕೊಡಬೇಕು ಎಂದು ಕೇಳಿರುವುದಾಗಿ ಅವರು ಹೇಳಿದ್ದಾರೆ.

ಎಲ್ಲ ಹಾಲಿ ಸಂಸದರಿಗೆ ಟಿಕೆಟ್ ನೀಡಬೇಕು ಎಂದು ಸ್ಕ್ರೀನಿಂಗ್ ಕಮಿಟಿಯಲ್ಲಿ ನಿರ್ಧಾರ ಮಾಡಿಕೊಂಡಿದ್ದೆವು, ಆದರೆ ದೇವೇಗೌಡ ಅವರು ರಾಹುಲ್ ಗಾಂಧಿ ಅವರೊಂದಿಗೆ ಸಭೆ ನಡೆಸಿ ತುಮಕೂರನ್ನು ತಮಗೆ ಪಡೆದುಕೊಂಡಿದ್ದಾರೆ ಎಂದು ಪರಮೇಶ್ವರ್ ಹೇಳಿದ್ದಾರೆ. '

ತುಮಕೂರಿನಲ್ಲಿ ಹಾಲಿ ಸಂಸದರಿದ್ದಾರೆ, ಅವರು ಜನಮೆಚ್ಚುಗೆ ಗಳಿಸಿದ್ದಾರೆ ಅವರಿಗೆ ಟಿಕೆಟ್ ನೀಡುವುದು ಸರಿಯಾದ ಕ್ರಮ. ದೇವೇಗೌಡ ಅವರೇ ತುಮಕೂರಿನಿಂದ ಸ್ಪರ್ಧಿಸುವುದಾದರೆ ಸ್ಪರ್ಧಿಸಲಿ ನಮ್ಮ ಅಭ್ಯಂತರ ಇಲ್ಲ ಆದರೆ ಬೇರೆಯವರು ಸ್ಪರ್ಧಿಸುವುದಾದರೆ ಹಾಲಿ ಸಂಸದ ಮುದ್ದಹನುಮೇಗೌಡ ಅವರಿಗೆ ಟಿಕೆಟ್ ನೀಡಬೇಕು ಎಂದು ಪರಮೇಶ್ವರ್ ಹೇಳಿದ್ದಾರೆ.

ಪ್ರತಿಭಟನೆ ತುಮಕೂರು ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿದ್ದಕ್ಕೆ ತುಮಕೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಹಾಗೂ ಜೆಡಿಎಸ್ ವರಿಷ್ಠರ ವಿರುದ್ಧವೂ ತುಮಕೂರಿನಲ್ಲಿ ಆಕ್ರೋಶದ ಮಾತುಗಳು ಕೇಳಿಬರುತ್ತಿವೆ

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ