ಆಳ್ವಾಸ್‌ನಲ್ಲಿ ಆತ್ಮಹತ್ಯೆ: ನೇಣಿಗೆ ಶರಣಾದ ಪಿಯುಸಿ ವಿದ್ಯಾರ್ಥಿನಿ

ಕರಾವಳಿ ಕರ್ನಾಟಕ ವರದಿ

ಮೂಡಬಿದಿರೆ:
ಮೂಡಬಿದಿರೆಯ ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

17 ವರ್ಷದ ಪ್ರೀತಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಈಕೆ ಆಳ್ವಾಸ್ ಸಂಸ್ಥೆಯ ಪ್ರಥಮ ಪಿಯು ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಳು. ತುಮಕೂರು ಮೂಲದ ಪ್ರೀತಿ ಸೋಮವಾರ ಬೆಳಗ್ಗೆ ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಆತ್ಮಹತ್ಯೆಗೆ ಕಾರಣವೇನೆಂದು ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಧ್ಯಾಹ್ನದ ವರೆಗೆ ತರಗತಿಗೆ ಹಾಜರಾಗಿದ್ದ ಪ್ರೀತಿ ಊಟಕ್ಕೆ ಹೋಗಿದ್ದವಳು ಆತ್ಮಹತ್ಯೆಗೆ ಮಾಡಿಕೊಂಡಿದ್ದಾಳೆ ಎಂದು ಆಕೆಯ ಸಹಪಾಠಿಗಳು ತಿಳಿಸಿದ್ದಾರೆ.

ಈ ಕುರಿತು ಮೂಡಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ