ಲೋಕಸಭಾ ಚುನಾವಣೆ- ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

ಕರಾವಳಿ ಕರ್ನಾಟಕ ವರದಿ

ಬೆಂಗಳೂರು:
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಏಪ್ರಿಲ್ 18 ರಂದು ನಡೆಯಲಿರುವ ಮೊದಲ ಹಂತದ ಚುನಾವಣೆಗೆ ಇಂದು ಅಧಿಸೂಚನೆ ಹೊರಡಲಿದೆ.

ಆ ಮೂಲಕ ಇಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗುತ್ತಿದೆ. ಆದ್ರೆ ಇಲ್ಲಿಯವರೆಗೆ ರಾಜ್ಯದ ಮೂರು ಪ್ರಮುಖ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನೇ ಇನ್ನೂ ಫೈನಲ್ ಮಾಡಿಲ್ಲ. ಅದರ ನಡುವೆಯೇ ಇಂದಿನಿಂದ ನಾಮಿನೇಷನ್ ಪ್ರಕ್ರಿಯೆ ಆರಂಭ ಕಾಣುತ್ತಿದೆ.

ಮೊದಲ ಹಂತದಲ್ಲಿ ರಾಜ್ಯದ ಒಟ್ಟು 28 ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ. ಮಾರ್ಚ್ 19 ಅಂದ್ರೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಮಾರ್ಚ್ 26 ನಾಮಪತ್ರ ಸಲ್ಲಿಸಲು ಕೊನೆ ದಿನವಾಗಿರುತ್ತದೆ. ಮಾರ್ಚ್ 27ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಮಾರ್ಚ್ 29 ನಾಮಪತ್ರ ಹಿಂಪಡೆಯಲು ಕೊನೆ ದಿನವಾಗಿರುತ್ತದೆ.

ಮೊದಲ ಹಂತದ ಕ್ಷೇತ್ರಗಳು:
ಬೆಂಗಳೂರು ಗ್ರಾಮಾಂತರ
ಬೆಂಗಳೂರು ಉತ್ತರ,
ಬೆಂಗಳೂರು ದಕ್ಷಿಣ
ಬೆಂಗಳೂರು ಸೆಂಟ್ರಲ್
ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ ,
ಮೈಸೂರು-ಕೊಡಗು, ಮಂಡ್ಯ, ತುಮಕೂರು,
ಚಿತ್ರದುರ್ಗ, ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ