ಚುನಾವಣೆ ಬಳಿಕ 'ಕುಮಾರಸ್ವಾಮಿ ಎಲ್ಲಿದಿಯಪ್ಪ'!

ಕರಾವಳಿ ಕರ್ನಾಟಕ ವರದಿ

ದಾವಣಗೆರೆ
: 'ನಿಖಿಲ್ ಎಲ್ಲಿದಿಯಪ್ಪ' ಎನ್ನುವುದು ಕರ್ನಾಟಕದಾದ್ಯಂತ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗುತ್ತಿದ್ದರೆ ಇನ್ನೊಂದೆಡೆ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಇನ್ನೂ ಒಂದು ಹೆಜ್ಜೆ ಮುಂದೆಹೋಗಿದ್ದಾರೆ. ಯಡಿಯೂರಪ್ಪ ಅವರ ಪ್ರಕಾರ ಚುನಾವಣೆಯ ಬಳಿಕ ರಾಜ್ಯದ ಜನತೆ 'ಕುಮಾರಸ್ವಾಮಿ ಎಲ್ಲಿದಿಯಪ್ಪ' ಎಂದು ಹುಡುಕುವ ಪರಿಸ್ಥಿತಿ ಬರಲಿದೆಯಂತೆ.

ದಾವಣೆಗೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಜಿ. ಎಂ. ಸಿದ್ದೇಶ್ವರ ಪರ ಪ್ರಚಾರ ಮಾಡಲು ಆಗಮಿಸಿರುವ ಯಡಿಯೂರಪ್ಪ ಕುಮಾರಸ್ವಾಮಿ ಅವರ ರಾಜಕೀಯ ಭವಿಷ್ಯದ ಬಗ್ಗೆ ವ್ಯಂಗ್ಯವಾಡಿದರು.

ಕುಮಾರಸ್ವಾಮಿ ಅವರಿಗೆ ಅಧಿಕಾರದ ಮದ ಜಾಸ್ತಿಯಾಗಿದೆ. ರಾಜ್ಯದಲ್ಲಿ 20 ಶೇಕಡಾ ಕಮಿಷನ್ ಸರ್ಕಾರ ಆಡಳಿತದಲ್ಲಿದೆ ಎಂದು ಹೇಳಿದ ಯಡಿಯೂರಪ್ಪ ಲೋಕಸಭಾ ಚುನಾವಣೆಗಾಗಿ ಹಾಸನಕ್ಕೆ ಮುಂಗಡವಾಗಿ 1344 ಕೋಟಿ ರೂಪಾಯಿಗಳನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ ಎಂದು ಆರೋಪಿಸಿದ್ದಾರೆ.

ಮಂಡ್ಯದಲ್ಲಿ ಸುಮಲತಾ ಹಾಗೂ ದಾವಣೆಗೆರೆಯಲ್ಲಿ ಸಿದ್ದೇಶ್ವರ ವಿಜಯ ಸಾಧಿಸಲಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಅಂತೆಯೆ ತುಮಕೂರಿನಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಸೋಲು ನಿಶ್ಚಿತವಾಗಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ