ಅಮೇಠಿಯಿಂದ ಇಂದು ರಾಹುಲ್ ಗಾಂಧಿ ನಾಮಪತ್ರ

ಕರಾವಳಿ ಕರ್ನಾಟಕ ವರದಿ

ಅಮೇಠಿ
: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಉತ್ತರ ಪ್ರದೇಶದ ಅಮೇಠಿಯಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಬುಧವಾರ ನಾಮಪತ್ರ ಸಲ್ಲಿಸಲಿದ್ದಾರೆ.

ಈಗಾಗಲೇ ಮೂರು ಬಾರಿ ಅಮೇಠಿಯಿಂದ ಲೋಕಸಭೆಗೆ ಆಯ್ಕೆಯಾಗಿರುವ ರಾಹುಲ್ ಗಾಂಧಿ ಈ ಬಾರಿ ಮತ್ತೊಮ್ಮೆ ನಾಮಪತ್ರ ಸಲ್ಲಿಸಿ ಅಮೇಠಿಯಿಂದ ಆಯ್ಕೆ ಬಯಸಿದ್ದಾರೆ.

ಈ ಬಾರಿ ಕೇರಳದ ವಯನಾಡಿನಿಂದಲೂ ರಾಹುಲ್ ಸ್ಪರ್ಧಿಸುತ್ತಿದ್ದಾರೆ.

ರಾಹುಲ್ ಗಾಂಧಿ ಅವರ ವಿರುದ್ಧ ಬಿಜೆಪಿಯಿಂದ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಸ್ಪರ್ಧಿಸುತ್ತಿದ್ದು, 2014 ರಲ್ಲೂ ಇರಾನಿ ಅವರು ರಾಹುಲ್ ಗಾಂಧಿ ಅವರ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಸ್ಮೃತಿ ಇರಾನಿ ಅವರು ಗುರುವಾರ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ. 2014 ರ ಚುನಾವಣೆಯಲ್ಲಿ ರಾಹುಲ್ ಗಾಂಧಿ 408,651 ಮತಗಳನ್ನು ಪಡೆದು 107,903 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ