‘ಪಿಎಂ ನರೇಂದ್ರ ಮೋದಿ’ ಚಿತ್ರ ಬಿಡುಗಡೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ

ಕರಾವಳಿ ಕರ್ನಾಟಕ ವರದಿ

ನವದೆಹಲಿ:
ವಿವೆಕ್ ಒಬೆರಾಯ್ ಅಭಿನಯದ ಪ್ರಧಾನಿ ನರೇಂದ್ರ ಮೋದಿ ಜೀವನಾಧಾರಿತ ಚಿತ್ರ "ಪಿಎಂ ನರೇಂದ್ರ ಮೋದಿ" ಚಿತ್ರ ಬಿಡುಗಡೆಗೆ ತಡೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾ ಮಾಡಿದೆ.ಚಲನಚಿತ್ರ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತದೆಯೇ ಎಂದು ನಿರ್ಧರಿಸುವುದು ಚುನಾವಣಾ ಆಯೋಗದ ಜವಾಬ್ದಾರಿ ಎಂಬುದಾಗಿ ನ್ಯಾಯಾಲಯ ಹೇಳಿದೆ.

ಚಿತ್ರಕ್ಕೆ ಸೆನ್ಸಾರ್ ಮಂಡಳಿ ಇನ್ನೂ ಪ್ರಮಾಣಪತ್ರ ನೀಡಿಲ್ಲ ಹಾಗಾಗಿ ಚಿತ್ರ ಬಿಡುಗಡೆಯ ವಿಚಾರವಾಗಿ ತಾನು ಮಧ್ಯಪ್ರವೇಶ ಮಾಡಲು ಸಾಧ್ಯವಿಲ್ಲ ಎಂದು ಸೋಮವಾರ ಕೋರ್ಟ್ ಸೂಚಿಸಿತ್ತು.  ಇಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಪೀಠವು ಕಾಂಗ್ರೆಸ್ ನ ಕಾರ್ಯಕರ್ತ ಅಮನ್ ಪನ್ವಾರ್ ಅವರ ಅರ್ಜಿಯನ್ನು ತಿರಸ್ಕರಿಸಿತು.
"ನಾವು ಚಲನಚಿತ್ರವನ್ನು ನೋಡಿಲ್ಲ. ಚಿತ್ರದ ವಿಷಯಗಳನ್ನು ನಾವು ತಿಳಿದಿಲ್ಲ. ನಮಗೇನೂ ಗೊತ್ತಿಲ್ಲದೆ ನಾವು ಹೇಗೆ ಚಿತ್ರ ಬಿಡುಗಡೆಗೆ ತಡೆ ನೀಡುವುದು?ಮುಖ್ಯ ನ್ಯಾಯಮೂರ್ತಿ ಗೊಗೊಯ್ ಪ್ರಶ್ನಿಸಿದ್ದಾರೆ.

ಸುಪ್ರೀಂ ತೀರ್ಪನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ವಿವೇಕ್ ಒಬೆರಾಯ್ "ನಮ್ಮ ಚಿತ್ರ ಈ ಹಿಂದಿನ ಪ್ರಕಟಣೆಯಂತೆ ಏಪ್ರಿಲ್ 11ಕ್ಕೆ ತೆರೆ ಕಾಣಲಿದೆ.ಪ್ರಜಾಪ್ರಭುತ್ವದ ನಂಬಿಕೆಯನ್ನು ಎತ್ತಿಹಿಡಿದ ಭಾರತಿಯ ನ್ಯಾಯಾಂಗಕ್ಕೆ  ಧನ್ಯವಾದ " ಎಂದಿದ್ದಾರೆ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ