ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ. ದಕ್ಷಿಣ ಕನ್ನಡ ದ್ವಿತೀಯ

ಕರಾವಳಿ ಕರ್ನಾಟಕ ವರದಿ

ಬೆಂಗಳೂರು
: ಪದವಿಪೂರ್ವ ಶಿಕ್ಷಣ ಇಲಾಖೆ ಸೋಮವಾರ ದ್ವಿತೀಯ ಪಿಯುಸಿ ಫಲಿತಾಂಶ ಪರೀಕ್ಷೆ ಫಲಿತಾಂಶ ಪ್ರಕಟಿಸಿದೆ. ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ, ಕೊಡಗು ಮೂರನೇ ಸ್ಥಾನ ಪಡೆದುಕೊಂಡಿದೆ.

2018-19ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.

ಮೊದಲ ಸ್ಥಾನ ಉಡುಪಿ- ಶೇ.92.20 ಎರಡನೇ ಸ್ಥಾನ ದಕ್ಷಿಣ ಕನ್ನಡ ಶೇ. 90.91- ತೃತೀಯ ಸ್ಥಾನ ಕೊಡಗು- 83.31 ಹಾಗೂ ಚಿತ್ರದುರ್ಗ ಕೊನೆಯ ಸ್ಥಾನ ಶೇ.51.42 ರಷ್ಟು ಗಳಿಸಿದೆ.

ಬೆಂಗಳೂರು ಗ್ರಾಮಾಂತರ 10ನೇ ಸ್ಥಾನ, ಬೆಂಗಳೂರು ಉತ್ತರ 11ನೇ ಸ್ಥಾನ, ವಿಕಲಚೇತನ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ, ದೃಷ್ಟಿ ವಿಕಲಚೇತನರು ಶೇ. 72ರಷ್ಟು ಫಲಿತಾಂಶ ಪಡೆದಿದ್ದಾರೆ.

94 ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳು ಶೂನ್ಯ ಫಲಿತಾಂಶ ಪಡೆದುಕೊಂಡಿವೆ. ಮೂರು ಸರ್ಕಾರಿ ಪದವಿ ಪೂರ್ವ ಕಾಲೇಜುಗಳು ಶೂನ್ಯ ಫಲಿತಾಂಶ ಪಡೆದಿವೆ.

ಗ್ರಾಮಾಂತರ ಭಾಗದ ವಿದ್ಯಾರ್ಥಿಗಳೇ ಮೇಲುಗೈ ಸಾಧಿಸಿದ್ದಾರೆ. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಶೇ. 66.58ರಷ್ಟು ಫಲಿತಾಂಶ ಪಡೆದಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಶೇ.66.39ರಷ್ಟು ಫಲಿತಾಂಶ ಲಭ್ಯವಾಗಿದೆ. ಇನ್ನು ಶೇ.68.24ರಷ್ಟು ಬಾಲಕಿಯರು ಉತ್ತೀರ್ಣರಾಗಿದ್ದಾರೆ. 80 ಕಾಲೇಜುಗಳಲ್ಲಿ ಶೇ.100ರಷ್ಟು ಫಲಿತಾಂಶ ಬಂದಿದೆ.

ಎಲ್ಲಾ ಕಾಲೇಜುಗಳಲ್ಲಿ ಪಿಯು ಫಲಿತಾಂಶ ಏ.16ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು http://pue.kar.nic.in ಮತ್ತು http://www.karresults.nic.in ವೆಬ್​ಸೈಟಿನ ಮೂಲಕ ಫಲಿತಾಂಶ ವೀಕ್ಷಿಸಬಹುದಾಗಿದೆ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ