ತೆಲಂಗಾಣ ಇಂಟರ್‌ಮೀಡಿಯೆಟ್ ಫಲಿತಾಂಶ: 3 ಲಕ್ಷ ವಿದ್ಯಾರ್ಥಿಗಳು ಫೇಲ್. 19 ಆತ್ಮಹತ್ಯೆ

ಕರಾವಳಿ ಕರ್ನಾಟಕ ವರದಿ

ಹೈದರಾಬಾದ್
: ತೆಲಂಗಾಣದ ಇಂಟರ್ ಮೀಡಿಯೇಟ್ ಫಲಿತಾಂಶ ಪ್ರಕಟಗೊಂಡ ಬಳಿಕ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ.

ಒಟ್ಟು 3 ಲಕ್ಷ ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದು, ಬುಧವಾರವೂ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು ಮೃತ ವಿದ್ಯಾರ್ಥಿಗಳ ಸಂಖ್ಯೆ 19ಕ್ಕೇರಿದೆ. ಕಳೆದ ನಾಲ್ಕು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಭಾರಿ ಪ್ರಮಾಣದಲ್ಲಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇಂಟರ್ ಮೀಡಿಯೇಟ್ ಫಲಿತಾಂಶದ ಬಗ್ಗೆ ರಾಜ್ಯಾದ್ಯಂತ ಪ್ರತಿಭಟನೆಗಳಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ನಿವಾಸ ಕಚೇರಿಯಲ್ಲಿ ವಿಶೇಷ ಸಭೆ ನಡೆಸಿದರು. ಉತ್ತರ ಪತ್ರಿಕೆಗಳ ಉಚಿತ ಮೌಲ್ಯಮಾಪನ ಮತ್ತು ಅಂಕಗಳ ಮರುಎಣಿಕೆಗೆ ಆದೇಶಿಸಿದ್ದಾರೆ.
ಮೂರು ಲಕ್ಷ ವಿದ್ಯಾರ್ಥಿಗಳ ಉತ್ತರಪತ್ರಿಕೆಯನ್ನು ಮರು ಮೌಲ್ಯಮಾಪನ ಮಾಡಬೇಕು ಎಂದು ತೆಲಂಗಾಣ ಹೈಕೋರ್ಟ್ ಮಂಗಳವಾರ ಆದೇಶಿಸಿತ್ತು. ಏ.29ಕ್ಕೆ ಪ್ರತಿಕ್ರಿಯೆ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಶಿಕ್ಷಣ ಮಂಡಳಿಗೆ ಸೂಚನೆ ನೀಡಿದೆ.

 
comments powered by Disqus
Facebook Twitter Google Plus Youtube
  
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ