ಬದಲಾಗಲಿದ್ದಾರೆಯೆ ರಾಜಸ್ಥಾನದ ಮುಖ್ಯಮಂತ್ರಿ? ಸಚಿನ್ ಪೈಲಟ್ ಶಕ್ತಿ ಪ್ರದರ್ಶನ.

ಕರಾವಳಿ ಕರ್ನಾಟಕಾ ವರದಿ

ಜೈಪುರ:
ಲೋಕಸಭೆ ಚುನಾವಣೆಯಲ್ಲಿ ಭಾರಿ ಹಿನ್ನಡೆ ಆಗಿರುವ್ ಹಿನ್ನೆಲೆಯಲ್ಲಿ ರಾಜಸ್ಥಾನ ಸರ್ಕಾರಕ್ಕೆ ಮತ್ತೊಂದು ಗಂಡಾಂತರ ಬಂದೆರಗಿದೆ.

ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಉಪಮುಖ್ಯಮಂತ್ರಿ ಸಚಿನ್ ಪೈಲಟ್ ನಡುವಿನ ಭಿನ್ನಾಭಿಪ್ರಾಯ ಮತ್ತೆ ತಾರಕಕ್ಕೇರಿದ್ದು ತಮ್ಮ ತಂದೆಯ ಪುಣ್ಯತಿಥಿಯನ್ನು ಪೈಲಟ್ ತಮ್ಮ ಶಕ್ತಿ ಪ್ರದರ್ಶನಕ್ಕಾಗಿ ಬಳಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಸಚಿನ್ ಪೈಲಟ್ ಅವರ ತಂದೆ ರಾಜೇಶ್ ಪೈಲಟ್ ಅವರ ಪುಣ್ಯತಿಥಿಯನ್ನು ಬುಧವಾರ ಆಚರಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಸಚಿನ್ ಪೈಲಟ್ ಅವರನ್ನೇ ಮುಖ್ಯಮಂತ್ರಿಯನ್ನಾಗಿ ಮಾಡುವಂತೆ ಬೆಂಬಲಿಸುವ 62 ಕ್ಕೂ ಹೆಚ್ಚು ಶಾಸಕರು ಭಾಗವಹಿದ್ದರು. ಇವರಲ್ಲಿ ಹದಿನೈದು ಜನ ರಾಜ್ಯ ಸಚಿವರೂ ಇದ್ದರು. ಈ ಕಾರ್ಯಕ್ರಮಕ್ಕೆ ಅಶೋಕ್ ಗೆಹ್ಲೋಟ್ ಬರದೇ ಇದ್ದಿದ್ದು, ಮತ್ತಷ್ಟು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ.

ಸರ್ಕಾರಕ್ಕೆ ಬೆಂಬಲ ನೀಡಿದ್ದ ಬಿಎಸ್ಪಿಯ ನಾಲ್ವರು ಶಾಸಕರು ಮತ್ತು ನಾಲ್ವರು ಪಕ್ಷೇತರರು ಸಹ ಈ ಕಾರ್ಯಕ್ರಮದಲ್ಲಿ ಹಾಜರಿದ್ದರು.

2018 ರಲ್ಲಿ ಡೆದ ವಿಧಾನಸಭೆ ಚುನಾವಣೆಯಲ್ಲಿ ಒಟ್ಟು 200 ಕ್ಷೇತ್ರಗಳ ರಾಜಸ್ಥಾ ವಿಧಾನಸಭೆಯಲ್ಲಿ 199 ಕ್ಷೇತ್ರಗಳಿಗೆ ಮತದಾನ ನಡೆದಿತ್ತು. ಇದರಲ್ಲಿ ಕಾಂಗ್ರೆಸ್ 99 ಕ್ಷೇತ್ರಗಳಲ್ಲಿ ಗೆದ್ದರೆ, ಬಿಜೆಪಿ 73 ಕ್ಷೇತ್ರಗಳಲ್ಲಷ್ಟೇ ಗೆಲ್ಲಲು ಸಮರ್ಥವಾಗಿತ್ತು. ನಂತರ ಕಾಂಗ್ರೆಸ್ ಪಕ್ಷೇತರ ಅಭ್ಯರ್ಥಿಯ ಬೆಂಬಲದೊಂದಿಗೆ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸಿತ್ತು. ಮುಖ್ಯಮಂತ್ರಿ ಸ್ಥಾನಕ್ಕಾಗಿ ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ನಡುವೆ ಭಿನ್ನಾಭಿಪ್ರಾಯ ಎದ್ದಿದ್ದರೂ ಹಿರಿತನದ ಆಧಾರದ ಮೇಲೆ ಗೆಹ್ಲೋತ್ ಅವರಿಗೇ ಸಿಎಂ ಸ್ಥಾನ ನೀಡಲಾಗಿತ್ತು.

ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 25 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಸೋತಿರುವುದು ಗೆಹ್ಲೋಟ್ ಅವರ ವರ್ಚಸ್ಸನ್ನು ಕುಗ್ಗಿಸಿದ್ದು, ಈ ಸಂದರ್ಭವನ್ನು ಬಳಸಿಕೊಂಡು ಪೈಲಟ್ ಮುಖ್ಯಮಂತ್ರಿ ಹುದ್ದೆಗೇರಲು ಯತ್ನ ನಡೆಸಿದ್ದಾರೆ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ