ಶಾಸಕ ರೋಷನ್ ಬೇಗ್ ಕಾಂಗ್ರೆಸ್ ಪಕ್ಷದಿಂದ ಅಮಾನತು

ಕರಾವಳಿ ಕರ್ನಾಟಕ ವರದಿ

ಬೆಂಗಳೂರು:
ಕಾಂಗ್ರೆಸ್ ಮುಖಂಡರ ವಿರುದ್ಧ ನಿರಂತರ ಹೇಳಿಕೆಗಳನ್ನು ನೀಡುತ್ತಿದ್ದ ಶಿವಾಜಿನಗರದ ಶಾಸಕ ರೋಷನ್ ಬೇಗ್ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.

ಶೋಕಾಸ್ ನೋಟಿಸ್ ಕೊಟ್ಟಿದ್ದರೂ ಅವುಗಳನ್ನು ನಿರ್ಲಕ್ಷಿಸಿ ಪಕ್ಷದ ನಾಯಕರ ವಿರುದ್ಧ ಹೇಳಿಕೆ ನೀಡುವುದನ್ನು ರೋಷನ್ ಬೇಗ್ ಮುಂದುವರಿಸಿದ್ದರು.

ಪಕ್ಷ ವಿರೋಧಿ ಚಟುವಟಿಕೆಗಳನ್ನು ನಡೆಸುತ್ತಿರುವ ಹಿನ್ನೆಲೆಯಲ್ಲಿ ರೋಷನ್ ಬೇಗ್ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಕೆಪಿಸಿಸಿಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅನುಮತಿ ನೀಡಿದೆ. ತತ್‌ಕ್ಷಣದಿಂದಲೇ ಜಾರಿಗೆ ಬರುವಂತೆ ರೋಷನ್ ಬೇಗ್ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.

ರೋಷನ್ ಬೇಗ್ ವಿರುದ್ಧ ಹೈಕಮಾಂಡಿಗೆ ದೂರು ಸಲ್ಲಿಸಿದ ಕೆಪಿಸಿಸಿ ರೋಷನ್ ಬೇಗ್ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವ ಬಗ್ಗೆ ಕೆಪಿಸಿಸಿ ಹಲವು ಬಾರಿ ಹಿರಿಯ ನಾಯಕರೊಂದಿಗೆ ಮತ್ತು ಹೈಕಮಾಂಡ್ ಜತೆ ಮಾತುಕತೆ ನಡೆಸಿತ್ತು. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಎಐಸಿಸಿಗೆ ಈ ಸಂಬಂಧ ದೂರು ಸಲ್ಲಿಸಿದ್ದರು

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ