ಕುಂದಾಪುರ: ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕ ರಸ್ತೆ ಅಪಘಾತದಲ್ಲಿ ಮೃತ್ಯು

ಕರಾವಳಿ ಕರ್ನಾಟಕ ವರದಿ

ಕುಂದಾಪುರ:
ಇಲ್ಲಿನ ವೆಂಕಟರಮಣ ಇಂಗ್ಲೀಷ್ ಮೀಡಿಯಂ ಶಾಲೆಯ ಶಿಕ್ಷಕ ಸುರೇಶ ಹಂಗಾರಕಟ್ಟೆ ಕೋಟ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ಅಕಾಲಿಕ ಸಾವಿಗೀಡಾಗಿದ್ದಾರೆ. ಅವರಿಗೆ 35 ವರ್ಷ ವಯಸ್ಸಾಗಿತ್ತು.

ಪ್ರತಿ ದಿನ ಹಂಗಾರಕಟ್ಟೆಯಿಂದ ಕುಂದಾಪುರಕ್ಕೆ ಬರುತ್ತಿದ್ದ ಸುರೇಶ ಶುಕ್ರವಾರ ಸಂಜೆ ಶಾಲೆಯಿಂದ ಮನೆಗೆ ಮರಳುತ್ತಿರುವಾಗ ಈ ದುರ್ಘಟನೆ ನಡೆದಿದೆ. ಅವರು ಚಲಾಯಿಸುತ್ತಿದ್ದ ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದಿದ್ದು ಈ ವೇಳೆ ಸ್ಥಳದಲ್ಲೆ ಸುರೇಶ ಮೃತಪಟ್ಟಿದ್ದಾರೆ.

ವೆಂಕಟರಮಣ ಇಂಗ್ಲೀಷ್ ಮೀಡಿಯಂ ಶಾಲೆಯ ಶಿಕ್ಷಕರಾಗಿ ಕಳೆದ ಒಂದು ದಶಕಕ್ಕೂ ಹೆಚ್ಚಿನ ಕಾಲ ಸೇವೆ ಸಲ್ಲಿಸಿದ್ದರು. ತಮ್ಮ ಅದ್ಭುತ ಪ್ರತಿಭೆ, ಹಾಸ್ಯ ಪ್ರವೃತ್ತಿಯ ಮೂಲಕ ಶಾಲೆಯಲ್ಲಿ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕರಾಗಿ ಜನಪ್ರಿಯರಾಗಿದ್ದರು.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ