ಕಾರ್ಕಳದ ಜನಪ್ರಿಯ, ಜನಾನುರಾಗಿ, ಹೃದಯವಂತ ಮಾಜಿ ಶಾಸಕ ಗೋಪಾಲ ಭಂಡಾರಿ ಇನ್ನಿಲ್ಲ

ಕರಾವಳಿ ಕರ್ನಾಟಕ ವರದಿ

ಮಂಗಳೂರು:
ಕಾರ್ಕಳದ ಮಾಜಿ ಶಾಸಕ ಗೋಪಾಲ್ ಭಂಡಾರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಂಗಳೂರಿನಿಂದ ಮಂಗಳೂರಿಗೆ ವೋಲ್ಪೋ ಬಸ್ ನಲ್ಲಿ ಬರುತ್ತಿದ್ದ ಸಂದರ್ಭ ಅವರಿಗೆ ಹೃದಯಾಘಾತವಾಗಿದೆ.

ಬೆಂಗಳೂರಿನಿಂದ ಮಧ್ಯಾಹ್ನ 2 ಘಂಟೆಗೆ ಹೊರಟಿದ್ದ ವೋಲ್ವೋ ಬಸ್ ನಲ್ಲಿದ್ದ ಗೋಪಾಲ್ ಭಂಡಾರಿ ಮಂಗಳೂರಿನ ಬಸ್ ನಿಲ್ದಾಣ ತಲುಪಿದ ನಂತರವೂ ಇಳಿಯದ್ದನ್ನು ಕಂಡ ನಿರ್ವಾಹಕರು ಪೊಲೀಸರಿಗೆ ತಿಳಿಸಿದ್ದಾರೆ.ಆಗ ಗೋಪಾಲ್ ಭಂಡಾರಿ ಹೃದಯಾಘಾತದಿಂದಾಗಿ ಮೃತರಾಗಿದ್ದಾರೆ ಎಂದು ತಿಳಿದುಬಂದಿದೆ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ