ನೆರೆ ಸಂತ್ರಸ್ತರ ಪರಿಹಾರ ನಿಧಿ ಸಂಗ್ರಹಣೆ

ಕರಾವಳಿ ಕರ್ನಾಟಕ ವರದಿ

ಕುಂದಾಪುರ, ಆಗಸ್ಟ್ 17
: ಜಿನೇವಾ ಕನ್ವೆನ್‍ಶನ್ ಡೇ ಹಿನ್ನಲೆಯಲ್ಲಿ ರಾಜ್ಯದಲ್ಲಿ ಸುರಿದ ಭಾರಿ ಮಳೆಯಿಂದಾದ ನಷ್ಟದಲ್ಲಿ ನೊಂದವರಿಗೆ ಸ್ಪಂದಿಸುವ ಸಲುವಾಗಿ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಕುಂದಾಪುರ ಪರಿಸರದ ವಿವಿಧ ಕಡೆ ಪರಿಹಾರ ನಿಧಿ ಸಂಗ್ರಹ ಜಾಥಾವನ್ನು ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೊತ್ತಾಡಿ ಉಮೇಶ್ ಶೆಟ್ಟಿಯವರು ಜಾಥಾಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕಾಲೇಜಿನ ಉಪ ಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ, ರೆಡ್‍ಕ್ರಾಸ್ ಘಟಕದ ಸಂಯೋಜಕ ಶಿವರಾಜ್ ದೇವಾಡಿಗ ನಾವುಂದ, ಸಹ ಸಂಯೋಜಕಿ ಸೌಮ್ಯ ಎನ್. ಕುಂದರ್ ಹಾಗೂ ಕಾಲೇಜಿನ ಬೋಧಕ-ಬೋಧಕೇತರರು ಉಪಸ್ಥಿತರಿದ್ದರು.

 
comments powered by Disqus
Facebook Twitter Google Plus Youtube
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ